ಬುಧವಾರ, ಆಗಸ್ಟ್ 17, 2022
25 °C

ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕಾಗಿ ತಾಲ್ಲೂಕಿನ ದೇಸೂರ, ಅಂಕಲಗಿ, ರಾಜಹಂಸಗಡ ಮತ್ತು ನಂದಿಹಳ್ಳಿಯಲ್ಲಿ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

‘ಫಲವತ್ತಾದ ಕೃಷಿ ಭೂಮಿ ಅಲ್ಲಿದೆ. ಕೃಷಿ ಕಾಯಕ ಅವಲಂಬಿಸಿ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಒಂದು ವೇಳೆ, ರೈಲ್ವೆ ಇಲಾಖೆ ಈ ಯೋಜನೆಗಾಗಿ ನಮ್ಮ ಜಮೀನು ಪಡೆದುಕೊಂಡರೆ ಬದುಕು ಸಂಕಷ್ಟಕ್ಕೆ ಸಿಲುಕಲಿದೆ. ಆದ್ದರಿಂದ ಬೇರೆಡೆ ರೈಲು ಮಾರ್ಗ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಪರಶುರಾಮ ಕೋಲಕಾರ, ಯಲ್ಲಪ್ಪ ಪಾಟೀಲ, ಪರಶುರಾಮ ಜಾಧವ, ಚೇತನ ಪಾಟೀಲ, ಕಿರಣ ಲೊಂಢೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.