ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ಯಾಜ್ಯ ವಿಲೇವಾರಿ ಘಟಕ: ಬೆನಕನಹಳ್ಳಿ ಗ್ರಾಮಸ್ಥರ ವಿರೋಧ

Last Updated 12 ಜುಲೈ 2021, 12:35 IST
ಅಕ್ಷರ ಗಾತ್ರ

ಬೆಳಗಾವಿ: ತಮ್ಮೂರಿನ ಸಮೀಪದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮಸ್ಥರು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಗ್ರಾಮದ ಕೆಎಫ್‍ಸಿಐ ಗೋದಾಮು ಸಮೀಪದಲ್ಲಿ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಇದರಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ, ಅಲ್ಲಿ ಸ್ಥಾಪಿಸಬಾರದು. ಆದೇಶ ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

ಸಿಐಟಿಯು ಸಂಘಟನೆಯ ಮುಖಂಡ ಮಹೇಶ ಕೋಲ್ಕಾರ, ‘ಬೆನಕನಹಳ್ಳಿ, ಸುಳಗಾ ಹಾಗೂ ಆಶ್ರಯ ವಸತಿಯ 200 ಕುಟುಂಬಗಳು ಅಲ್ಲಿ ವಾಸಿಸುತ್ತಿವೆ. ಅಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿದರೆ ಜನರ ನೆಮ್ಮದಿ ಹಾಳಾಗಲಿದೆ. ಆದ್ದರಿಂದ ಊರಿಂದ ದೂರದ ಪ್ರದೇಶ ಆಯ್ಕೆ ಮಾಡಿಕೊಳ್ಳಬೇಕು’ ಎಂದು ಕೋರಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT