ಬುಧವಾರ, ಆಗಸ್ಟ್ 21, 2019
22 °C
ಬಾಲಚಂದ್ರ ಜಾರಕಿಹೊಳಿ ಸೂಚನೆ

ಅಧಿಕಾರಿಗಳ ಸಭೆ ನಡೆಸಿದ ಶಾಸಕರ ಪಿಎ!

Published:
Updated:
Prajavani

ಗೋಕಾಕ: ಮಳೆಯಿಂದಾಗಿ ಘಟಪ್ರಭಾ, ಹಿರಣ್ಯಕೇಶಿ ಹಾಗೂ ಮಾರ್ಕಂಡೇಯ ನದಿಗಳ ನೀರಿನ ಮಟ್ಟ ಏರುತ್ತಿರುವುದರಿಂದ ಪ್ರವಾಹ ಭೀತಿ ಎದುರಾಗುವ ಸಂಭವವಿದೆ. ಹೀಗಾಗಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಡೆಸಿದ ಸಭೆಯಲ್ಲಿ ದೂರವಾಣಿ ಮೂಲಕ ನಿರ್ದೇಶನ ನೀಡಿದರು. ಜನರು ಹಾಗೂ ಜಾನುವಾರುಗಳ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ನದಿ ತೀರದ ಲೋಳಸೂರ, ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ತಳಕಟ್ನಾಳ, ತಿಗಡಿ, ಸುಣಧೋಳಿ, ಭೈರನಟ್ಟಿ, ಹುಣಶ್ಯಾಳ ಪಿವೈ, ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿಜಿ, ಫುಲಗಡ್ಡಿ, ಮಸಗುಪ್ಪಿ, ಪಟಗುಂದಿ, ಕಮಲದಿನ್ನಿ, ರಂಗಾಪೂರ, ಮುನ್ಯಾಳ ಗ್ರಾಮಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ನೋಡಲ್ ಅಧಿಕಾರಿಗಳು ಸ್ಥಳದಲ್ಲಿಯೇ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಅಗತ್ಯಕ್ಕೆ ಅನುಗುಣವಾಗಿ ಗಂಜಿ ಕೇಂದ್ರಗಳನ್ನು ತೆರೆಯಬೇಕು. ಜನರನ್ನು ಸ್ಥಳಾಂತರಿಸಲು ಬೋಟ್‌ಗಳ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.

ಗೋಕಾಕ ತಹಶೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್‌ ಮುರಳೀಧರ ತಳ್ಳಿಕೇರಿ, ಜಿಲ್ಲಾ ಪಂಚಾಯ್ತಿ ಸದಸ್ಯ ಗೋವಿಂದ ಕೊಪ್ಪದ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಬಿಇಒ ಅಜಿತ ಮನ್ನಿಕೇರಿ, ಹೆಸ್ಕಾಂ ಎಇಇ ಆರ್‌.ಜಿ. ನಾಗನ್ನವರ, ಹನಮಂತ ತೇರದಾಳ, ಮುತ್ತೆಪ್ಪ ಕುಳ್ಳೂರ, ರವಿ ಪರುಶೆಟ್ಟಿ, ಉಪ ತಹಶೀಲ್ದಾರರಾದ ಲಕ್ಷ್ಮಣ ಭೋವಿ, ಎಂ.ಐ. ಹಿರೇಮಠ ಇದ್ದರು.

Post Comments (+)