ಮಂಗಳವಾರ, ಸೆಪ್ಟೆಂಬರ್ 29, 2020
25 °C

ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್‌ಪಿ ಎಸ್.ವಿ. ಬಸರಗಿ ಹಾಗೂ ಸಿಪಿಐ ಶಂಕರಗೌಡ ಬಸನಗೌಡರ ಮತ್ತು ಸಿಬ್ಬಂದಿ ಒಳಗೊಂಡ ತಂಡ ರಚಿಸಲಾಗಿತ್ತು. ತಂಡಕ್ಕೆ ಎಸ್ಪಿ ನಗದು ಬಹುಮಾನ ಘೋಷಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು