ಬುಧವಾರ, ಜುಲೈ 28, 2021
25 °C

ಬೆಳಗಾವಿಯ ಮನೆಗಳಲ್ಲಿ ಕಳವು | ಆರೋಪಿ ಬಂಧನ: ₹ 4 ಲಕ್ಷ ಮೌಲ್ಯದ ಆಭರಣ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ಮನೆಗಳಲ್ಲಿ ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿ ಅವರಿಂದ ₹ 4 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಂಟಮೂರಿ ಕಾಲೊನಿಯ ರಾಜು ಯಲ್ಲಪ್ಪ ಆಲಟ್ಟಿ (19 ವರ್ಷ) ಬಂಧಿತ.

‘ಮನೆಯ ಬಾಗಿಲಿನ ಬೀಗ ಮುರಿದು ಅಲ್ಮೆರಾದಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಯಾರೋ ಕಳವು ಮಾಡಿದ್ದಾರೆ’ ಎಂದು ವಿನಾಯಕ ನಗರದ ನಕ್ಷತ್ರ ಕಾಲೊನಿಯ ಸಂಗೀತಾ ಪಾಟೀಲ ಮತ್ತು ಹಿಂಡಲಗಾ ವಿಜಯನಗರದ ದತ್ತ ಕಾಲೊನಿಯ ಸಂಗೀತಾ ಬಿರ್ಜೆ ಹೋದ ವರ್ಷದ ನವೆಂಬರ್‌ನಲ್ಲಿ ದೂರು ನೀಡಿದ್ದರು.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ ಡಿ. ಸಂತೋಷಕುಮಾರ್‌ ಹಾಗೂ ತಂಡದವರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ‘ಎರಡು ಮನೆಗಳಲ್ಲೂ ಕಳವು ಮಾಡಿದ್ದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಕಳವು ಮಾಡಿದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು