ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಕಾರ್ಮಿಕರ ಮೇಲೆ ಹಲ್ಲೆ: ಓರ್ವ ವಶಕ್ಕೆ

Published 13 ಜೂನ್ 2024, 17:40 IST
Last Updated 13 ಜೂನ್ 2024, 17:40 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ವಡಗಾವಿಯ ಬನಶಂಕರಿ ಗಲ್ಲಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಮೇಲೆ ಗುರುವಾರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಹಾಪುರ ಠಾಣೆ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.

'ದಶರಥ ಧಾಮಣೇಕರ ಅವರ ವಿದ್ಯುತ್ ಮಗ್ಗದಲ್ಲಿ ಬಿಹಾರ ಮೂಲದ ನಾಲ್ವರು ಕಾರ್ಮಿಕರು ದುಡಿಯುತ್ತಿದ್ದಾರೆ‌‌. ಹೊರರಾಜ್ಯದವರು ಇಲ್ಲಿ ಬಂದು ಕೆಲಸ ಮಾಡುತ್ತಿರುವ ಕಾರಣ, ನಮಗೆ ಉದ್ಯೋಗ ಸಿಗುತ್ತಿಲ್ಲ ಎಂದು ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ. ಈ ಪೈಕಿ ಒಬ್ಬನನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದೇವೆ. ತಪ್ಪೆಸಗಿದ ಎಲ್ಲರನ್ನೂ ಬಂಧಿಸುತ್ತೇವೆ' ಎಂದು ಶಹಾಪುರ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT