ಶುಕ್ರವಾರ, ಆಗಸ್ಟ್ 19, 2022
27 °C

ಗಾಂಜಾ ಸಾಗಿಸುತ್ತಿದ್ದ ಒಡಿಸ್ಸಾದ ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ಒಡಿಸ್ಸಾದ ಕಂದಮಾಲ ಜಿಲ್ಲೆಯ ತಿಲಬಂಗಿ ಗ್ರಾಮದ ಅನುಕೂಲಚಂದ್ರ ಮಹೇಂದ್ರ ಕಲ್ಹಾರ (22) ಬಂಧಿತರು. ಅವರು ಮಹಾಂತೇಶ ನಗರ ಬಳಿ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿಸುವಾಗ ಸಿಕ್ಕಿಬಿದ್ದಿದ್ದಾರೆ. ಅವರಿಂದ ₹ 50ಸಾವಿರ ಮೌಲ್ಯದ 2 ಕೆ.ಜಿ. 60 ಗ್ರಾಂ. ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಬಕಾರಿ ಇನ್‌ಸ್ಪೆಕ್ಟರ್ ರವೀಂದ್ರ ಬಿ. ಹೊಸಳ್ಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆ ಮೇಲೆ ಆ್ಯಸಿಡ್ ದಾಳಿ

ರಾಯಬಾಗ: ಪಟ್ಟಣದಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದ ಮಹಿಳೆ ಮೇಲೆ ಶುಕ್ರವಾರ ಸಂಜೆ 7ರ ಸುಮಾರಿಗೆ ಆ್ಯಸಿಡ್ ದಾಳಿ ನಡೆದಿದೆ.

ಮಹಿಳೆಗೆ ಸುಟ್ಟ ಗಾಯಗಳಾಗಿದ್ದು, ಅವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಆ್ಯಸಿಡ್ ಎರಚಿದ ವ್ಯಕ್ತಿಯು ತಕ್ಷಣ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.