ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿಗದಿ; ಗರಿಗೆದರಿದ ಚಟುವಟಿಕೆ

Last Updated 29 ನವೆಂಬರ್ 2021, 14:45 IST
ಅಕ್ಷರ ಗಾತ್ರ

ಬೆಳಗಾವಿ: ಚುನಾಯಿತ ಪ್ರತಿನಿಧಿಗಳ ಅಧಿಕಾರದ ಅವಧಿ ಪೂರ್ಣಗೊಂಡಿರುವ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಆಯ್ಕೆಗೆ ರಾಜ್ಯ ಚುನಾವಣಾ ಆಯೋಗವು ಸೋಮವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಡಿ. 27ರಂದು ಮತದಾನ ಮತ್ತು ಡಿ.30ರಂದು ಮತ ಎಣಿಕೆ ನಡೆಯಲಿದೆ.

ಪುರಸಭೆಗಳಾದ ಅಥಣಿ (27 ವಾರ್ಡ್‌), ಹಾರೂಗೇರಿ, ಮುಗಳಖೋಡ, ಮುನವಳ್ಳಿ ಹಾಗೂ ಉಗಾರ ಖುರ್ದ್‌ (ತಲಾ 23 ವಾರ್ಡ್‌ಗಳು), ಪಟ್ಟಣ ಪಂಚಾಯಿತಿಗಳಾದ ಎಂ.ಕೆ. ಹುಬ್ಬಳ್ಳಿ (14), ಕಂಕನವಾಡಿ, ನಾಗನೂರ ಮತ್ತು ಯಕ್ಸಂಬಾ (ತಲಾ 17), ಚನ್ನಮ್ಮನ ಕಿತ್ತೂರು (18), ಅರಭಾವಿ (16), ಐನಾಪುರ (19), ಶೇಡಬಾಳ (16), ಚಿಂಚಲಿ (19), ಬೋರಗಾಂವ (17) ಹಾಗೂ ಕಲ್ಲೋಳಿ (16)ಯಲ್ಲಿ ಚುನಾವಣೆ ನಡೆಯಲಿದೆ. ಮೂಡಲಗಿ ಪುರಸಭೆಯ (ವಾರ್ಡ್ ನಂ.9, ಇದು ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ) ಉಪ ಚುನಾವಣೆ ನಿಗದಿಯಾಗಿದೆ.

ಮುಹೂರ್ತ ನಿಗದಿಯಾಗುತ್ತಿದ್ದಂತೆಯೆ ಆ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಕಾಂಕ್ಷಿಗಳು ಸಿದ್ಧತೆ ಆರಂಭಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಡಿ.10ರಂದು ನಡೆಯಲಿರುವ ಚುನಾವಣೆ ಮುಗಿಯುತ್ತಿದ್ದಂತೆಯೇ, ಮತ್ತೊಂದು ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ.

ಡಿ.8ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಡಿ.15 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.16ರಂದು ಪರಿಶೀಲನೆ ನಡೆಯಲಿದೆ. ಡಿ.18– ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣೆ ನಿಗದಿಯಾಗಿರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಡಿ.8ರಿಂದ ಡಿ.30ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಅಭ್ಯರ್ಥಿಗಳಿಗೆ ನಗರಸಭೆಗೆ ತಲಾ ₹ 2 ಲಕ್ಷ, ಪುರಸಭೆಗಳಲ್ಲಿ ₹1.50 ಲಕ್ಷ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ₹1 ಲಕ್ಷ ವೆಚ್ಚದ ಮಿತಿ ನಿಗದಿಪಡಿಸಲಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT