ಮಂಗಳವಾರ, ಜೂನ್ 22, 2021
24 °C

ಆಮ್ಲಜನಕ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಉದ್ದೇಶಿಸಿರುವ ಸ್ಥಳವನ್ನು ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅಧಿಕಾರಿಗಳೊಂದಿಗೆ ಮಂಗಳವಾರ ಪರಿಶೀಲಿಸಿದರು.

ಶಾಸಕ ಅಭಯ ಪಾಟೀಲ ವಿನಂತಿ ಮೇರೆಗೆ ಎಲ್ ಅಂಡ್ ಟಿ ಕಂಪನಿಯವರು ಘಟಕ ಸ್ಥಾಪಿಸಲು ಮುಂದೆ ಬಂದಿದ್ದಾರೆ. ಆ ಕಂಪನಿಯ ಅಧಿಕಾರಿಗಳು ಹಾಗೂ ಬಿಮ್ಸ್‌ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ಮೊದಲಾದವರು ಸ್ಥಳ ಪರಿಶೀಲನೆ ನಡೆಸಿದರು. ಇಂದಿರಾ ಕ್ಯಾಂಟೀನ್ ಪಕ್ಕದಲ್ಲಿರುವ ಖಾಲಿ ಜಾಗವನ್ನು ವೀಕ್ಷಿಸಿದರು. ಆದಷ್ಟು ಬೇಗ ಘಟಕ ಸ್ಥಾಪಿಸಿ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕದ್ವಯರು ಸೂಚಿಸಿದರು.

ಈಗಾಗಲೇ ಒಂದು ಘಟಕವು ಆಸ್ಪತ್ರೆ ಆವರಣದಲ್ಲಿದೆ. ಹೊಸ ಘಟಕ ಸ್ಥಾಪನೆಯಾದಲ್ಲಿ ಹೆಚ್ಚುವರಿಯಾಗಿ 50 ಹಾಸಿಗೆಗಳೆಗೆ ಆಮ್ಲಜನಕ ಪೂರೈಕೆ ಮಾಡಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು