ಶುಕ್ರವಾರ, ಮೇ 7, 2021
26 °C

ಬಹಿರಂಗ ಪ್ರಚಾರ ಅಂತ್ಯ ಏ.15ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಏ. 17ರಂದು ನಡೆಯಲಿದ್ದು, ಗುರುವಾರ (ಏ.15) ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.

‘ಕ್ಷೇತ್ರದ ಮತದಾರರಲ್ಲದವರು ಏ.15ರ ಸಂಜೆ 7ರ ಒಳಗೆ ಇಲ್ಲಿಂದ ನಿರ್ಗಮಿಸಬೇಕು. ಇಲ್ಲದಿದ್ದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮತದಾರರ ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು ನಡೆಸುವುದಕ್ಕಾಗಿ ಬಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂಡಲಗಿ, ಗೋಕಾಕದಲ್ಲಿ ಪ್ರಚಾರ ಕೈಗೊಂಡು ಇಲ್ಲೇ ತಂಗಿದ್ದಾರೆ. ಗುರುವಾರವೂ (ಏ.15) ಅವರು ವಿವಿಧೆಡೆ ಮತ ಬೇಟೆ  ನಡೆಸಲಿದ್ದಾರೆ. ಸಂಜೆ ಹಿಂಡಲಗಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ನಾಯಕ ದೇವೇಂದ್ರ ಫಡಣವಿಸ್ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಏ.16ರಂದು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅವಕಾಶವಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು