ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ಹಕ್ಕು ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ’

Last Updated 13 ಡಿಸೆಂಬರ್ 2019, 15:27 IST
ಅಕ್ಷರ ಗಾತ್ರ

ಬೆಳಗಾವಿ: ‘ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅವರಿಗೆ ತಲುಪಿಸಬೇಕು’ ಎಂದು ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ಧ್ ಹೇಳಿದರು.

ಇಲ್ಲಿನ ಗಾಂಧಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಮಕ್ಕಳ ಸಹಾಯವಾಣಿ ವತಿಯಿಂದ ಹಮ್ಮಿಕೊಂಡಿದ್ದ ‘ತೆರೆದ ಮನೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದಲ್ಲಿ ಅವುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸುವುದು ತೆರೆದ ಮನೆ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.

‘ಮಕ್ಕಳಿಗಾಗಿ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಆದರೂ ಮಕ್ಕಳ ಮೇಲಿನ ದೌರ್ಜನ್ಯ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ’ ಎಂದು ವಿಷಾದಿಸಿದರು.

ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಸಂಯೋಜಕ ಮಲ್ಲಪ್ಪ ಕುಂದರಗಿ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕ ವೈ.ಜಿ. ಕುಂದರಗಿ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಅಧಿಕಾರಿ ಎಸ್.ಎಂ. ಕೋಸಂಬರಿ, ಶಿಕ್ಷಣ ಸಂಯೋಜಕ ಡಿ.ಬಿ. ನದಾಫ್, ವಿಜಯ್ ಲಕ್ಷ್ಮಿ ಗುಳ್ಳ, ಅಂಗನವಾಡಿ ಮೇಲ್ವಿಚಾರಕಿ ವಿಜಯಲಕ್ಷ್ಮಿ ಕರಿಕಟ್ಟಿ ಇದ್ದರು.

ಶಿಕ್ಷಕಿ ಎಸ್.ಎಸ್. ಪಟಗುಂಡಿ ಸ್ವಾಗತಿಸಿದರು. ಎ.ಎ. ಹವಾಲ್ದಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT