ಗುರುವಾರ , ಆಗಸ್ಟ್ 5, 2021
25 °C

ಮರಾಠಿ ಬ್ಯಾನರ್‌ಗೆ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ‘ಪ್ರತಿಜ್ಞಾ ದಿನ’ಕ್ಕೆ ಶುಭ ಕೋರಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮರಾಠಿ ಭಾಷೆಯಲ್ಲಿ ಬ್ಯಾನರ್‌ ಅಳವಡಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷರಾಗಿ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಸಲೀಂ ಅಹಮ್ಮದ್‌ ಅವರು ಇದೇ 2ರಂದು ಬೆಳಿಗ್ಗೆ 11ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ. ಅವರಿಗೆ ಶುಭ ಕೋರಿ ಬ್ಯಾನರ್‌ ಅಳವಡಿಸಿದ್ದಾರೆ. ಕನ್ನಡ, ಮರಾಠಿಯಲ್ಲಿ ಬ್ಯಾನರ್‌ ಅಳವಡಿಸಿದ್ದಾರೆ.

‘ರಾಜಕಾರಣಿಗಳಿಗೆ ಕನ್ನಡ, ಮರಾಠಿ ಸೇರಿದಂತೆ ವಿವಿಧ ಭಾಷಿಕರನ್ನು ಸೆಳೆದುಕೊಳ್ಳುವುದು ಅನಿವಾರ್ಯವಾಗಿರಬಹುದು. ಆದರೆ, ಕರ್ನಾಟಕದಲ್ಲಿ ಇದ್ದಾಗ ಮೊದಲ ಸ್ಥಾನವನ್ನು ಕನ್ನಡದಲ್ಲಿ ನೀಡಬೇಕು. ಬ್ಯಾನರ್‌ ಇರಲಿ, ಜಾಹೀರಾತು ಫಲಕವಿರಲಿ ಮೊದಲ ಸಾಲಿನಲ್ಲಿ ಕನ್ನಡ ಬರೆಯಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಘಟಕದ ಅಧ್ಯಕ್ಷ ಮಹಾದೇವ ತಳವಾರ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು