ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ನಿರ್ದೇಶನಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಕ್ಕೆ ಆದೇಶ

Last Updated 30 ಸೆಪ್ಟೆಂಬರ್ 2021, 15:41 IST
ಅಕ್ಷರ ಗಾತ್ರ

ಬೆಳಗಾವಿ: ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯವನ್ನು ಬೆಂಗಳೂರಿನಿಂದ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಅ.1ರಿಂದ ಜಾರಿಗೆ ಬರುವಂತೆ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಿಸಿ ಸರ್ಕಾರ ಗುರುವಾರ ಆದೇಶಿಸಿದೆ. ಇದರೊಂದಿಗೆ, ಈ ಭಾಗದ ಕಬ್ಬು ಬೆಳೆಗಾರರು, ಹೋರಾಟಗಾರರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

‘ಕಚೇರಿಯನ್ನು ಸ್ಥಳಾಂತರಿಸುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಪ್ರಾಧಿಕಾರದೊಂದಿಗೆ ಕಬ್ಬು ಅಭಿವೃದ್ಧಿ ಆಯುಕ್ತರು ಚರ್ಚಿಸಬೇಕು. ಕಚೇರಿಯನ್ನು ಸುವರ್ಣ ವಿಧಾನಸೌಧಕ್ಕೆ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಿಸುವವರೆಗೆ ಬೆಳಗಾವಿ ನಗರದಲ್ಲಿರುವ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಅ.1ರಿಂದ ತಾತ್ಕಾಲಿಕವಾಗಿ ಕಚೇರಿ ಆರಂಭಿಸಬೇಕು’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧೀನ ಕಾರ್ಯದರ್ಶಿ (ಸಕ್ಕರೆ) ಆರ್. ಮಂಜುಳಾ ಆದೇಶದಲ್ಲಿ ತಿಳಿಸಿದ್ದಾರೆ.

‘ಬೆಂಗಳೂರಿನಲ್ಲಿರುವ ಕಚೇರಿಯ ಸಂಪೂರ್ಣ ದಾಖಲೆಗಳು ಹಾಗೂ ಪೀಠೋಪಕರಣಗಳನ್ನು ಬೆಳಗಾವಿಗೆ ಸುರಕ್ಷಿತವಾಗಿ ಸ್ಥಳಾಂತರಿಸಬೇಕು. ಅದಕ್ಕೆ ತಗಲುವ ವೆಚ್ಚವನ್ನು ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಂ‍ಪನ್ಮೂಲದಲ್ಲಿ ಭರಿಸಬೇಕು’ ಎಂದು ಆದೇಶಿಸಿದ್ದಾರೆ.

ಕಚೇರಿ ಸ್ಥಳಾಂತರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಅ.3ರಿಂದ ಕಾರ್ಯಾರಂಭಿಸಲಿದೆ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT