ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಸ್ವಾರ್ಥ ಮನೋಭಾವದಿಂದ ಸೇವೆ ಸಲ್ಲಿಸಿ: ಶಾಸಕ ಅಭಯ ಪಾಟೀಲ

Last Updated 11 ಅಕ್ಟೋಬರ್ 2021, 14:14 IST
ಅಕ್ಷರ ಗಾತ್ರ

ಬೆಳಗಾವಿ: ‘ನಿಸ್ವಾರ್ಥ ಮನೋಭಾವದಿಂದ ಸಮಾಜ ಸೇವೆ ಮಾಡಬೇಕು’ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ಇಲ್ಲಿನ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ಭಾನುವಾರ ನಡೆದ ಜಿತೋ (ಜೈನ ಅಂತರಾಷ್ಟ್ರೀಯ ವ್ಯಾಪಾರ ಸಂಸ್ಥೆ) ಬೆಳಗಾವಿ ವಿಭಾಗದ 2021–22ನೇ ಸಾಲಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

‘ಸಮಾಜ ಸೇವೆ ಮಾಡಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಸಂಘ–ಸಂಸ್ಥೆಗಳವರು ಆ ಅವಕಾಶ ಬಳಸಿಕೊಳ್ಳಬೇಕು. ಯುವಕರಿಗೆ ಮಾರ್ಗದರ್ಶನ ನೀಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ‘ಜಿತೋ ಸಂಸ್ಥೆಯು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಜನಮಾನಸದಲ್ಲಿ ಹೆಸರು ಗಳಿಸಿದೆ. ಸೇವಾ ಚಟುವಟಿಕೆಗಳು ಮುಂದುವರಿಯಲಿ’ ಎಂದು ಆಶಿಸಿದರು.

ಜಿತೋ ಅಪೆಕ್ಸ್ ನಿರ್ದೇಶಕ ಸತೀಶ ಮೆಹ್ತಾ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

2020–21ನೇ ಸಾಲಿನಲ್ಲಿ ಸಂಸ್ಥೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಕರ್ನಾಟಕ, ಕೇರಳ ಹಾಗೂ ಗೋವಾ ವಲಯದ ಕಾರ್ಯದರ್ಶಿ ವಿಕ್ರಮ ಜೈನ ಅವರಿಗೆ ‘ಜಿತೋ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಉದ್ಯಮಿ ಗೋಪಾಲ ಜಿನಗೌಡ ಮತ್ತು ಭರತೇಶ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ರಾಜೀವ ದೊಡ್ಡಣ್ಣವರ ಅಲ್ಪಸಂಖ್ಯಾತರ ಯೋಜನೆಗಳ ಮಾಹಿತಿ ಹೊತ್ತಿಗೆ ಬಿಡುಗಡೆ ಮಾಡಿದರು.

ನೂತನ ಅಧ್ಯಕ್ಷ ಪುಷ್ಪಕ ಹನಮಣ್ಣವರ, ಪ್ರಧಾನ ಕಾರ್ಯದರ್ಶಿ ಅಮಿತ ದೋಷಿ, ಖಜಾಂಚಿ ಅಭಿಷೇಕ ಮಿರ್ಜಿ, ಉಪಾಧ್ಯಕ್ಷರಾದ ಮುಖೇಶ ಪೋರವಾಲ, ವೀರಧವಳ ಉಪಾಧ್ಯೆ, ಕಾರ್ಯದರ್ಶಿಗಳಾಗಿ ಎನ್. ಪೋರವಾಲ, ವಿಜಯಕುಮಾರ ಪಾಟೀಲ, ಜಂಟಿ ಖಜಾಂಚಿ ಆಕಾಶ ಪಾಟೀಲ ಮತ್ತು ಸದಸ್ಯರಾಗಿ ಮಹೇಂದ್ರ ಪರಮಾರ, ಮತ್ತು ನಿತಿನ ಚಿಪ್ರೆ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಅಧ್ಯಕ್ಷ ಸುನಿಲ ಕಟಾರಿಯಾ ಸ್ವಾಗತಿಸಿದರು. ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಅಂಕಿತ ಖೋಡಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪಕ ದಡೂತಿ, ಪ್ರಮೋದ ಪಾಟೀಲ, ಡಾ.ಗೋಮಟೇಶ ಕುಸನಾಳೆ ಅತಿಥಿಗಳನ್ನು ಪರಿಚಯಿಸಿದರು. ಬಿ.ಪೋರವಾಲ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT