ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ

Last Updated 21 ಮೇ 2021, 14:01 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕ ಉತ್ಪಾದಿಸುವ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಘಟಕ ನಿರ್ಮಾಣ ಕಾಮಗಾರಿಗೆ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಶುಕ್ರವಾರ ಚಾಲನೆ ನೀಡಿದರು.

‘ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದಂತೆ ಆಮ್ಲಜನಕದ ಕೊರತೆಯು ತೀವ್ರವಾಗುತ್ತಿರುವುದರ ಬಗ್ಗೆ ಗಂಭೀರವಾಗಿ ಪರಿಗಣಿಸಿ 15 ದಿನಗಳ ಹಿಂದೆಯೇ ಎಲ್ ಅಂಡ್ ಟಿ ಕಂಪನಿಯ ಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದೆ. ಅವರು ಘಟಕ ಸ್ಥಾಪಿಸಲು ಮುಂದೆ ಬಂದಿದ್ದಾರೆ. ಈ ಘಟಕವು ₹ 60 ಲಕ್ಷ ಅಂದಾಜು ಮೊತ್ತದಲ್ಲಿ ತಲೆ ಎತ್ತಲಿದೆ. 50 ಚದರ‌ ಅಡಿಯ ಜಾಗದಲ್ಲಿ ಯಂತ್ರ ಅಳವಡಿಸಲಾಗುವುದು. ಇದರಿಂದ 50ರಿಂದ 60 ಹಾಸಿಗೆಗಳಿಗೆ ನಿರಂತರವಾಗಿ ಆಮ್ಲಜನಕ ಸರಬರಾಜು ಮಾಡಬಹುದಾಗಿದೆ. ಜೂನ್ 10ರ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT