ಪ್ರೇಕ್ಷಣೀಯ ಸ್ಥಳ ವೀಕ್ಷಣೆಗೆ ಬಸ್ ಸೌಲಭ್ಯ: ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ

ಬೆಳಗಾವಿ: ‘ಮಳೆಯಿಂದ ತುಂಬಿ ಹರಿಯುತ್ತಿರುವ ಜಲಧಾರೆಗಳನ್ನು ಒಳಗೊಂಡ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಹೋಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪ ಮುಂಜಿ ತಿಳಿಸಿದ್ದಾರೆ.
ಈ ಬಗ್ಗೆ ಗುರುವಾರ ಪ್ರಕಟಣೆ ನೀಡಿರುವ ಅವರು, ‘ಪ್ರತಿ ಶನಿವಾರ ಮತ್ತು ಭಾನುವಾರ (ಆಗಸ್ಟ್ 29ರವರೆಗೆ) ಕೇಂದ್ರ ಬಸ್ ನಿಲ್ದಾಣದಿಂದ ಪ್ಯಾಕೇಜ್ ಟೂರ್ (ವೇಗದೂತ ಸಾರಿಗೆ) ವ್ಯವಸ್ಥೆ ಕಲ್ಪಿಸಲಾಗಿದೆ. ₹ 180 ಟಿಕೆಟ್ ದರ ನಿಗದಿಪಡಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
‘ಕೇಂದ್ರ ಬಸ್ ನಿಲ್ದಾಣದಿಂದ ಬೆಳಿಗ್ಗೆ 9ಕ್ಕೆ ಹೊರಟು 10ಕ್ಕೆ ಹಿಡಕಲ್ ಜಲಾಶಯ ತಲುಪಲಿದೆ. ಪ್ರವಾಸಿ ತಾಣದ ಗಂಟೆಯ ವೀಕ್ಷಣೆ ನಂತರ 11ಕ್ಕೆ ಅಲ್ಲಿಂದ ಹೊರಟು 11.30ಕ್ಕೆ ಗೊಡಚಿನಮಲ್ಕಿ ಜಲಪಾತ ತಲುಪುತ್ತದೆ. ಅಲ್ಲಿ ಒಂದೂವರೆ ಗಂಟೆ ವೀಕ್ಷಣೆ ಬಳಿಕ ಮಧ್ಯಾಹ್ನ 1ಕ್ಕೆ ಗೋಕಾಕ ಜಲಪಾತಕ್ಕೆ ತೆರಳುತ್ತದೆ. ಸಂಜೆ 6ಕ್ಕೆ ಕೇಂದ್ರ ಬಸ್ ನಿಲ್ದಾಣಕ್ಕ ತಲುಪಲಾಗುವುದು. ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಇರುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 7760991612 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.