ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಆಗ್ರಹ ಸತ್ಯಾಗ್ರಹದಲ್ಲಿ ಮುಖ್ಯಮಂತ್ರಿಯೂ ಪಾಲ್ಗೊಳ್ಳಲಿ: ಪಂಚಮಸಾಲಿ ಶ್ರೀ

Last Updated 26 ಅಕ್ಟೋಬರ್ 2020, 8:43 IST
ಅಕ್ಷರ ಗಾತ್ರ

ಬೆಳಗಾವಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದಿಂದ ಪ್ರವರ್ಗ 2(ಎ)ಗೆ ಹಾಗೂ ಕೇಂದ್ರದಿಂದ ಒಬಿಸಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಅ.28ರಂದು ನಡೆಯಲಿರುವ ಉಪವಾಸ ಸತ್ಯಾಗ್ರಹದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡು ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

‘20 ವರ್ಷಗಳಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ ಮಾಡುವುದು, ಅವರ ಮನೆ ಬಾಗಿಲಿಗೆ ಹೋಗಿ ಮನವಿ ಸಲ್ಲಿಸುವುದು ಮಾಡಿದ್ದೇವೆ. ಇನ್ಮುಂದೆ ನಮ್ಮದೇನಿದ್ದರೂ ಹೋರಾಟದ ಮಾರ್ಗ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಶೇ. 90ರಷ್ಟು ಬಡವರು, ಕೃಷಿಯನ್ನೇ ಮೂಲ ಕಸುಬಾಗಿ ಮಾಡಿಕೊಂಡಿರುವ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎನ್ನುವುದು ನ್ಯಾಯಯುತ ಬೇಡಿಕೆಯಾಗಿದೆ.2012ರಲ್ಲಿ ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ದೆವು. ಆಗಿನ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿತ್ತು. ಆ ಸಮಿತಿಯು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ಎಂಟು ವರ್ಷಗಳಾದರೂ ನಮ್ಮ ಬೇಡಿಕೆ ಈಡೇರಿಲ್ಲ’ ಎಂದು ದೂರಿದರು.

‘ರಾಜ್ಯದ ಮೂಲೆ ಮೂಲೆಗಳಿಂದ ಸಮುದಾಯದವರು ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ರೋಹಿಣಿ ಪಾಟೀಲ, ವಕೀಲ ಬಸವರಾಜ ರೊಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT