ಭಾನುವಾರ, ಮೇ 9, 2021
25 °C

ಕನ್ನಡ ರಾಜ್ಯೋತ್ಸವ ವಿರೋಧಿಸಿ ‘ಕರಾಳ ದಿನಾಚರಣೆ’ ನಡೆಸಲು ಅನುಮತಿ ನೀಡದಂತೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಳಗಾವಿ: ಕನ್ನಡ ರಾಜ್ಯೋತ್ಸವ ವಿರೋಧಿಸಿ ನಗರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯವರು (ಎಂಇಎಸ್) ಆಯೋಜಿಸುವ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಭಾನುವಾರ ಪಂಜಿನ ಮೆರವಣಿಗೆ ನಡೆಸಿದರು.

ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಎಂಇಎಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ‘ಸರ್ಕಾರವು ಕನ್ನಡದ ನೆಲ, ಜಲ, ಭಾಷೆ, ಸಂಸ್ಕೃತಿ ರಕ್ಷಣೆ ವಿಷಯದಲ್ಲಿ ರಾಜಿಯಾಗದೇ ಕನ್ನಡದ ಹಿತ ಕಾಯಬೇಕು. ಯಾವುದೇ ಮುಲಾಜಿಲ್ಲದೇ ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಕನ್ನಡಿಗರು ಹಬ್ಬ ಆಚರಿಸುವಾಗ, ನಾಡದ್ರೋಹ ಚಟುವಟಿಕೆ ಕೈಗೊಳ್ಳುವವರ ಕರಾಳ ದಿನಾಚರಣೆಗೆ ಅವಕಾಶ ಕೊಡಬಾರದು’ ಎಂದು ಒತ್ತಾಯಿಸಿದರು.

‘ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ತಕ್ಷಣ ಸಭೆ ಕರೆದು ಕರಾಳ ದಿನಾಚರಣೆ ನಿಷೇಧಿಸಿ ಆದೇಶ ಹೊರಡಿಸಬೇಕು. ಒಂದು ವೇಳೆ ಅವಕಾಶ ಕೊಟ್ಟಲ್ಲಿ, ರಾಜ್ಯದ ಎಲ್ಲ ಜಿಲ್ಲೆಗಳ ಕರವೇ ಕಾರ್ಯಕರ್ತರು ಬೆಳಗಾವಿಗೆ ಮುತ್ತಿಗೆ ಹಾಕುತ್ತಾರೆ. ಕರಾಳ ದಿನಾಚರಣೆ ತಡೆಯುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವ ತಳವಾರ, ಮುಖಂಡ ಗಣೇಶ ರೋಕಡೆ ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು