ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪ್ಲಾಸ್ಟಿಕ್‌ ಚೀಲದಲ್ಲಿ ಶಿಶು ಇಟ್ಟು ಮರಕ್ಕೆ ನೇತುಹಾಕಿ ಪರಾರಿ

Last Updated 25 ಆಗಸ್ಟ್ 2022, 16:10 IST
ಅಕ್ಷರ ಗಾತ್ರ

ಬೆಳಗಾವಿ: ಖಾನಾಪುರ ಸಮೀಪದ ನೇರಸಾ ಗೌಳಿವಾಡದಲ್ಲಿ ಗುರುವಾರ ಪ್ಲಾಸ್ಟಿಕ್‌ ಚೀಲದಲ್ಲಿ ಇಟ್ಟು ಮರಕ್ಕೆ ನೇತುಹಾಕಿದ ನವಜಾತ ಗಂಡು ಶಿಶು ಪತ್ತೆಯಾಗಿದೆ.

ಮಗು ಅಳುವ ಶಬ್ದ ಕೇಳಿದ ಗ್ರಾಮದ ಆಶಾ ಕಾರ್ಯಕರ್ತೆ ಸತ್ಯವತಿ ದೇಸಾಯಿ ಅವರು ಮಗುವನ್ನು ರಕ್ಷಿಸಿದರು. 108 ಆಂಬುಲೆನ್ಸ್‌ ಕರೆಸಿ ಶಿಶುವನ್ನು ಖಾನಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದರು.

ಚಿಕ್ಕ ಮಕ್ಕಳ ತಜ್ಞ ಡಾ.ಪವನ ಪೂಜಾರಿ ಶಿಶುವಿಗೆ ಚಿಕಿತ್ಸೆ ನೀಡಿದರು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.

ಶಿಶು 2.5 ಕೆ.ಜಿ ತೂಕವಿದೆ. ಬುಧವಾರ ರಾತ್ರಿ ಇಡೀ ಮರದಲ್ಲೇ ಬಿಟ್ಟಿದ್ದರಿಂದ ನಿತ್ರಾಣಗೊಂಡಿದೆ. ಹಾಗಾಗಿ, ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಹಸುಳೆಯನ್ನು ಯಾರು ಬಿಟ್ಟುಹೋಗಿದ್ದಾರೆ ಎಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT