ಮಂಗಳವಾರ, ಮಾರ್ಚ್ 2, 2021
19 °C

ರಾಮದುರ್ಗ: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ–ಪ್ರಾತಿನಿಧಿಕ ಚಿತ್ರ

ರಾಮದುರ್ಗ (ಬೆಳಗಾವಿ): ಪಟ್ಟಣದ ನವೀಪೇಟೆಯಲ್ಲಿ ಒಂದೇ ಕುಟುಂಬ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಗೊಬ್ಬರದ ವರ್ತಕರಾಗಿದ್ದ ಪ್ರವೀಣ ರಮೇಶ ಶೆಟ್ಟರ (37), ಅವರ ಪತ್ನಿ ರಾಜೇಶ್ವರಿ (30), ಮಕ್ಕಳಾದ ಅಮೃತಾ (8) ಮತ್ತು ಅದ್ವಿಕ್‌ (5) ಮೃತರು.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ‘ವ್ಯಾಪಾರ ಚೆನ್ನಾಗಿತ್ತು. ಹೆಂಡತಿ ಮಕ್ಕಳೊಂದಿಗೆ ಅನ್ಯೂನ್ಯವಾಗಿದ್ದರು’ ಎಂದು ನೆರೆಹೊರೆಯವರು ತಿಳಿಸಿದರು.

ಘಟನಾ ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಡಿಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐ ಶಶಿಕಾಂತ ವರ್ಮಾ, ಪಿಎಸ್‌ಐ ನಾಗನಗೌಡ ಕಟ್ಟಿಮನಿಗೌಡ್ರು, ಮುಖಂಡ ಮಲ್ಲಣ್ಣ ಯಾದವಾಡ ಭೇಟಿ ನೀಡಿದ್ದರು.

ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು