ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಉತ್ತಮ ಆರೋಗ್ಯಕ್ಕೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಿ’

Published : 19 ಸೆಪ್ಟೆಂಬರ್ 2024, 6:54 IST
Last Updated : 19 ಸೆಪ್ಟೆಂಬರ್ 2024, 6:54 IST
ಫಾಲೋ ಮಾಡಿ
Comments

ಯಮಕನಮರಡಿ: ‘ಸದೃಢ ದೇಹ, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಿಬೇಕು’ ಎಂದು ಕಾಂಗ್ರೆಸ್ ಯುವ ಮುಖಂಡ ಕಿರಣ ರಜಪೂತ ಹೇಳಿದರು.

ಸಮೀಪದ ಅತ್ತಿಹಾಳ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಮಂಗಳವಾರ ನಡೆದ ಹುಕ್ಕೇರಿ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಕಬಡ್ಡಿ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕ್ರೀಡೆಗಳಲ್ಲಿ ಸೋಲು– ಗೆಲುವು ಸಾಮಾನ್ಯ. ಎರಡನ್ನೂ ಸ್ವೀಕರಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.

ಕ್ಷೇತ್ರ ಸಂಪನ್ಮೂಲ ಅಧಿಕಾರಿ ಬಿ.ಎಸ್.ಪದ್ಮನವರ, ದಯಾನಂದ ಪಾಟೀಲ, ಮಾರುತಿ ಪಾಟೀಲ, ಸಿದ್ದಣ್ಣ ಅಮ್ಮಣಗಿ, ಗಣಪತಿ ಕಾಂಬಳೆ, ಶಿವಲಿಂಗ ಗುಮಚಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಿ.ಆರ್.ಮಠಪತಿ, ಮಹಾಂತೇಶ ಪಾಟೀಲ, ಮಂಜು ಕಾಂಬಳೆ, ಅಪ್ಪು ಸುತಾರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT