ಬುಧವಾರ, ಸೆಪ್ಟೆಂಬರ್ 23, 2020
27 °C

ಬೆಳಗಾವಿ | ಪಾಶ್ಚಾಪೂರ ಸೇತುವೆ ಮುಳುಗಡೆ; ಸಂಪರ್ಕ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಿರಂತರ ಮಳೆಯಿಂದಾಗಿ ಹುಕ್ಕೇರಿ ತಾಲ್ಲೂಕಿನ ಮಾರ್ಕಂಡೇಯ ಜಲಾಶಯದಿಂದ ನೀರು ಹೊರಬಿಡಲಾಗಿದ್ದು ಹಿಡಕಲ್ ಡ್ಯಾಂ, ಬೆಳಗಾವಿ ಮೊದಲಾದ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಪಾಶ್ಚಾಪೂರ ಗ್ರಾಮದ ಸೇತುವೆ ಸಂಪೂರ್ಣವಾಗಿ ಮುಳುಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದೆ.

ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರವಾಹದ ಮುನ್ನೆಚ್ಚರಿಕೆ ಕ್ರಮವಾಗಿ, ನದಿ ತೀರದಲ್ಲಿರುವ ಪಾಶ್ಚಾಪೂರ, ಕುಂದರಗಿ, ಮಾವನೂರ, ಗೊಡಚಿನಮಲ್ಕಿ ಮುಂತಾದ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆಯಿಂದಿರಲು ಹಾಗೂ ಎತ್ತರದ ಸ್ಥಳಗಳಿಗೆ ಹೋಗಲು ಗ್ರಾಮ ಪಂಚಾಯಿತಿಗಳ ಮುಖಾಂತರ ಡಂಗುರ ಹಾಗೂ ಧ್ವನಿವರ್ಧಕ ಮೂಲಕ ಸೂಚನೆ ನೀಡಲಾಗಿದೆ. 

ಪಾಶ್ಚಾಪೂರ ಗ್ರಾಮದ ಸೇತುವೆಯು ಶಿಥಿಲಾವಸ್ಥೆಯಲ್ಲಿದೆ. ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ನಾಲ್ಕೈದು ಬಾರಿ ಜಲಾವೃತವಾಗುವ ಸೇತುವೆಯನ್ನು ಎತ್ತರಿಸಿ ಹೊಸದಾಗಿ ನಿರ್ಮಿಸಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ವಾಹನಗಳು ಶಾಬಂದರ್- ಬಸಾಪೂರ ಮೂಲಕ ಬಳಸಿಕೊಂಡು ಹಿಡಕಲ್ ಡ್ಯಾಮ್ ಗ್ರಾಮಕ್ಕೆ ಹೋಗುತ್ತಿವೆ ಎಂದು ನಿವಾಸಿ ಎ.ವೈ. ಸೋನ್ಯಾಗೋಳ‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು