ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ

Last Updated 28 ಆಗಸ್ಟ್ 2020, 16:38 IST
ಅಕ್ಷರ ಗಾತ್ರ

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ.

‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ‍ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು.

‘ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಡಿಸಿಪಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT