ಬೆಳಗಾವಿ: ಪ್ರವರ್ಗ '2ಎ' ಮೀಸಲಾತಿಗೆ ಆಗ್ರಹಿಸಿ, ಸುವರ್ಣ ವಿಧಾನಸೌಧ ಬಳಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದೆ.

ವಿವಿಧೆಡೆಯಿಂದ ಬರುತ್ತಿರುವ ಟ್ರ್ಯಾಕ್ಟರ್ಗಳನ್ನು ಹಿರೇಬಾಗೇವಾಡಿ ಬಳಿಯೇ ತಡೆಯಲಾಗಿದೆ. ಹಾಗಾಗಿ ಜನರು ಕಾಲ್ನಡಿಗೆ ಮೂಲಕವೇ ಪ್ರತಿಭಟನಾ ವೇದಿಕೆಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಒಬ್ಬೊಬ್ಬರೇ ನಾಯಕರು ಬಂದು ಭಾಗಿಯಾಗುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಬಸವಜಯ ಮೃತ್ಯುಂಜಯ ಸ್ವಾಮೀಜಿ ಇದೀಗ ವೇದಿಕೆಗೆ ಬಂದಿದ್ದು, ಸಾವಿರಾರು ಕಾರ್ಯಕರ್ತರು ಜೈಕಾರ ಹಾಕುತ್ತಿದ್ದಾರೆ. ಪಂಚಮಸಾಲಿ ಸಮುದಾಯದ ಹಿರಿಯ ನಾಯಕರು ಒಬ್ಬೊಬ್ಬರಾಗಿ ಬಂದು ಹೋರಾಟದಲ್ಲಿ ಭಾಗಿಯಾಗುತ್ತಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಸಿ.ಸಿ.ಪಾಟೀಲ, ಅರವಿಂದ ಬೆಲ್ಲದ ಭಾಗಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.