ಶುಕ್ರವಾರ, ಅಕ್ಟೋಬರ್ 18, 2019
28 °C

ಮರಳು ವಿಲೇವಾರಿಗೆ ಅನುಮತಿ: ಜಿಲ್ಲಾಧಿಕಾರಿ

Published:
Updated:

ಬೆಳಗಾವಿ: ‘ಪ್ರವಾಹದಿಂದ ಕೃಷಿ ಜಮೀನುಗಳಲ್ಲಿ ಸಂಗ್ರಹವಾಗಿರುವ ಮರಳನ್ನು ಡಿ.31ರ ಅಂತ್ಯದೊಳಗೆ ವಿಲೇವಾರಿ ಮಾಡಲು ಪಟ್ಟಾ ಜಮೀನುಗಳ ಮಾಲೀಕರಿಗೆ ಅನುಮತಿ ನೀಡಲಾಗಿದೆ’ ಎಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

‘ಮರಳು ವಿಲೇವಾರಿ ಮನವಿ ಮತ್ತು ಷರತ್ತುಗಳ ಕುರಿತು ಜಿಲ್ಲಾಧಿಕಾರಿ ಕಚೇರಿ ಅಥವಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು. ಪ್ರಸಕ್ತ ವರ್ಷ ಉಂಟಾದ ಪ್ರವಾಹದಿಂದಾಗಿ ನದಿ ಪಾತ್ರದ ಹಲವು ಕಡೆ ಕೃಷಿ ಜಮೀನುಗಳಲ್ಲಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗಿ ಮರಳು ಸಂಗ್ರಹವಾಗಿದೆ. ಜಮೀನುಗಳನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಲು ಮರಳು ತೆರವುಗೊಳಿಸುವುದು ಅತ್ಯಗತ್ಯವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಹೊರಡಿಸಿರುವ ಮರಳು ಗಣಿಗಾರಿಕೆ ಮಾರ್ಗಸೂಚಿ-2019ರ ಅನ್ವಯ ಪರಿಸರ ವಿಮೋಚನಾ ಪತ್ರದ ವಿನಾಯತಿ ಇರುತ್ತದೆ. ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿಗಳು 1994ರ ನಿಯಮ 56ರ ಅನ್ವಯ ಅಧಿಕಾರ ಚಲಾಯಿಸಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಷರತ್ತು ಮತ್ತು ನಿಬಂಧನೆಗಳ ಮೇರೆಗೆ ಕ್ರಮ ವಹಿಸಲಾಗಿದೆ. ಕೃಷಿ ಜಮೀನುಗಳಲ್ಲಿ ಸಂಗ್ರಹವಾಗಿರುವ ಮರಳು ವಿಲೇವಾರಿಗೆ ಅನುಮತಿ ಕೊಡಲಾಗಿದೆ’ ಎಂದು ತಿಳಿಸಿದ್ದಾರೆ.

 

Post Comments (+)