ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಶುಕ್ರವಾರ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ತಡೆದು ವಶಕ್ಕೆ ಪಡೆದರು.

ಕೇರಳ ಮೂಲದವಾಮದೇವನ್ ಆತ್ಮಹತ್ಯೆಗೆ ಯತ್ನಿಸಿ ಗೊಂದಲ ಸೃಷ್ಟಿಸಿದ ವ್ಯಕ್ತಿ. ‘ರಾಯಬಾಗದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಆರೂವರೆ ತಿಂಗಳಿನಿಂದ ನನಗೆ ಸಂಬಳ ಬಂದಿಲ್ಲ. ವರ್ಗಾವಣೆಯನ್ನೂ ಮಾಡಲಾಗಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಇದರಿಂದ ಜೀವನ ನಿರ್ವಹಣೆಗೆ ಬಹಳ ತೊಂದರೆಯಾಗಿದೆ. ಹೀಗಾಗಿ, ಆತ್ಮಹತ್ಯೆಗೆ ಮುಂದಾದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಡ್ಯೂಟಿಯಲ್ಲಿದ್ದ ಪೊಲೀಸರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿತು. ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.