ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ, 10 ವರ್ಷ ಶಿಕ್ಷೆ

ಭಾನುವಾರ, ಜೂಲೈ 21, 2019
22 °C

ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ, 10 ವರ್ಷ ಶಿಕ್ಷೆ

Published:
Updated:

ಬೆಳಗಾವಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಪೋಕ್ಸೊ ಕಾಯ್ದೆಯಡಿ 10 ವರ್ಷ ಜೈಲು ಶಿಕ್ಷೆ ಹಾಗೂ ₹ 24ಸಾವಿರ ದಂಡ ವಿಧಿಸಿ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.‌

ಅಥಣಿ ತಾಲ್ಲೂಕು ಉಗಾರ ಕೆ.ಎಚ್‌. ಗ್ರಾಮದ ಶಿವರಾಜ ಬನಸೋಡೆ (26) ಶಿಕ್ಷೆಗೆ ಒಳಗಾದವರು. 2015ರ ಸೆ. 24ರಂದು ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಮಹಾರಾಷ್ಟ್ರದ ಗಣಪತಿಪುಳೆಗೆ ಕರೆದುಕೊಂಡು ಹೋಗಿ ಬಾಡಿಗೆ ಮನೆಯಲ್ಲಿರಿಸಿಕೊಂಡಿದ್ದ. ಆಕೆಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದ. ಈ ಕುರಿತು ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ಆರ್‌.ಎಸ್. ಬಡೆದೆಸಾರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ. ನಂಜುಂಡಯ್ಯ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !