ಅಥಣಿ: ಮುಂಬೈನಿಂದ ಬೆಂಗಳೂರಿನತ್ತ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ ಇಲ್ಲಿನ ಜತ್ತ– ಜಾಂಬೋಟಿ ರಸ್ತೆಯ ತಿರುವಿನಲ್ಲಿ ಸೋಮವಾರ ಮಧ್ಯರಾತ್ರಿ ಪಲ್ಟಿಯಾಗಿ ಬಿದ್ದಿದೆ. ರಸ್ತೆಯ ಮೇಲೆ ಹರಿದ ಪೆಟ್ರೋಲ್ ಅನ್ನು ಅಕ್ಕಪಕ್ಕದ ನಿವಾಸಿಗಳು ಕ್ಯಾನ್, ಡಬ್ಬಿ, ಬಾಟಲಿಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ. ಇನ್ನುಳಿದ ಪೆಟ್ರೋಲ್ ರಸ್ತೆಯ ಮೇಲೆ ಹರಿದುಹೋಗಿದೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ. ಸುಮಾರು 29,000 ಲೀಟರ್ ಪೆಟ್ರೋಲ್ ಟ್ಯಾಂಕರ್‌ನಲ್ಲಿತ್ತು ಎಂದು ಹೇಳಲಾಗುತ್ತಿದೆ. ಚಾಲಕ ಹಾಗೂ ಕ್ಲಿನರ್‌ಗೆ ಯಾವುದೇ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಈ ಮಾರ್ಗದ ಮೂಲಕ ಸಂಚರಿಸುತ್ತಿದ್ದ ವಾಹನಗಳನ್ನು ಪರ್ಯಾಯ ಮಾರ್ಗದ ಮೂಲಕ ಕಳುಹಿಸಿಕೊಟ್ಟರು.

ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.