ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ಲಾಬಿಗೆ ಮಣಿದ ಸರ್ಕಾರ: ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆರೋಪ

Last Updated 13 ಡಿಸೆಂಬರ್ 2022, 9:45 IST
ಅಕ್ಷರ ಗಾತ್ರ

ಚನ್ನಮ್ಮನ ಕಿತ್ತೂರು: ‘ಸಕ್ಕರೆ ಲಾಬಿಗೆ ಮಣಿದ ಸರ್ಕಾರ ಕಬ್ಬು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎರಡೂವರೆ ತಿಂಗಳು ವಿಳಂಬವಾಗಿ ಕಾರ್ಖಾನೆ ಪ್ರಾರಂಭವಾಗಿವೆ’ ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ದೂರಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಮಾದರಿಯಲ್ಲಿ ಕರ್ನಾಟಕದ ವಿಧಾನಸಭೆ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಮೋದಿ ಅಲೆ ಎಲ್ಲಿಯೂ ಇಲ್ಲ. ಮುಕ್ತವಾಗಿ ಚುನಾವಣೆ ನಡೆಸದೆ ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ ಮುಂದಾಗಿದೆ’ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಡಿ. ಬಿ. ಇನಾಮದಾರ ಮಾತನಾಡಿ, ‘ಚರ್ಮಗಂಟು ರೋಗದಿಂದ ಜಿಲ್ಲೆಯಲ್ಲಿ 30 ಸಾವಿರ ಜಾನುವಾರುಗಳು ಮೃತಪಟ್ಟಿವೆ. ಜಿಲ್ಲೆಯ ಅಧಿಕಾರಿಯೊಬ್ಬರನ್ನು ಕೇಳಿದರೆ 3,800 ಎಂದು ಮಾಹಿತಿ ಕೊಡುತ್ತಾರೆ’ ಎಂದು ಅವರು ಹೇಳಿದರು.

ಶಂಕರ ಹೊಳಿ, ಅಪ್ಪೇಶ ದಳವಾಯಿ, ಸಿದ್ದಣ್ಣ ಕಂಬಾರ, ಕಲ್ಲಪ್ಪ ಕುಗಟಿ, ಮಡಿವಾಳಪ್ಪ ವರಗಣ್ಣವರ, ಜೈರುದ್ದಿನ್ ಜಮಾದಾರ, ಸಂಜೀವ ಲೋಕಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT