ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈಲಟ್ ತರಬೇತಿ ಕೇಂದ್ರ: 2 ಸಂಸ್ಥೆಗಳಿಗೆ ಒಪ್ಪಿಗೆ -ಮಂಗಲಾ ಅಂಗಡಿ

Last Updated 4 ಜೂನ್ 2021, 15:32 IST
ಅಕ್ಷರ ಗಾತ್ರ

ಬೆಳಗಾವಿ: ‘ವಿಮಾನ ಹಾರಾಟ ಕ್ಷೇತ್ರದಲ್ಲಿ ಅಗತ್ಯ ತರಬೇತಿ ನೀಡುವ ಸಂಸ್ಥೆ ಅಥವಾ ಕೇಂದ್ರವನ್ನು (‍ಪೈಲಟ್ ತರಬೇತಿ ಕೇಂದ್ರ) ನಗರದ ಸಮೀಪದಲ್ಲಿ ಪ್ರಾರಂಭಿಸಲು 2 ಖಾಸಗಿ ತರಬೇತಿ ಸಂಸ್ಥೆಗಳಿಗೆ ಕೇಂದ್ರ ವಿಮಾನಯಾನ ಸಚಿವಾಲಯವು ಇತ್ತೀಚೆಗೆ ಒಪ್ಪಿಗೆ ಸೂಚಿಸಿದೆ’ ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಆಯ್ಕೆಯಾದ ಈ ಎರಡು ಸಂಸ್ಥೆಗಳಿಗೆ ತಲಾ 5ಸಾವಿರ ಚ.ಮೀ. ಅಳತೆಯಂತೆ ಒಟ್ಟು 10ಸಾವಿರ ಚ.ಮೀ. ಜಾಗವನ್ನು ತರಬೇತಿ ಕೇಂದ್ರ (ಪಾರ್ಕಿಂಗ್ ಸ್ಥಳ) ನಿರ್ಮಿಸಲು ಹಾಗೂ 25 ವರ್ಷಗಳವರೆಗೆ ಕೆಲವು ಷರತ್ತುಗಳ ಅನ್ವಯ ಲೀಸ್ ಮೇಲೆ ನೀಡಲು ವಿಮಾನನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಗುರುತಿಸಿದ್ದಾರೆ. ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ಅವಶ್ಯವಿರುವ ಎಲ್ಲ ಅಭಿವೃದ್ಧಿ ಕಾಮಗಾರಿಯನ್ನು ಸಹ ಪ್ರಸ್ತಾಪಿತ ಸ್ಥಳದಲ್ಲಿ ಕೈಗೊಳ್ಳಲಾಗುವುದು. ಪೈಲಟ್ ತರಬೇತಿ ಕೇಂದ್ರದಿಂದ ಆಸಕ್ತ ಯುವಜನರಿಗೆ ತುಂಬಾ ಅನುಕೂಲವಾಗಲಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಪತಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ಬೆಳಗಾವಿಯಲ್ಲಿ ವಿಮಾನ ಹಾರಾಟ ತರಬೇತಿ ಸಂಸ್ಥೆ ಪ್ರಾರಂಭವಾಗಬೇಕು ಎಂಬ ಕನಸು ಕಂಡಿದ್ದರು. ಅದರಂತೆ ಅವರು ಹಲವು ಬಾರಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಮಾನಯಾನ ಸಚಿವ ಹರದೀಪ್‌ಸಿಂಗ್‌ ಅವರನ್ನು ಒತ್ತಾಯಿಸಿದ್ದರು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT