ಬೆಳಗಾವಿ: ಬೆಳಗಾವಿಯ ಹ್ಯೂಮ್ ಪಾರ್ಕ್‌ನಲ್ಲಿ ಆಯೋಜಿಸಿದ್ದ ಸಸ್ಯ ಸಂತೆ, ತೋಟಗಾರಿಕೆ ಅಭಿಯಾನ ಮತ್ತು ತಾಳೆ ಬೆಳೆ ಸಸಿ ವಿತರಣಾ ಕಾರ್ಯಕ್ರಮವನ್ನು ಶಾಸಕ ಆಸೀಫ್ ಸೇಠ್ ಶುಕ್ರವಾರ ಉದ್ಘಾಟಿಸಿದರು. ಸಂಸದೆ ಮಂಗಲಾ ಅಂಗಡಿ ಸಸ್ಯ ಮಾರಾಟ ಮಳಿಗೆಗಳನ್ನು ವೀಕ್ಷಿಸಿದರು.
ಪ್ರಜಾವಾಣಿ ವಾರ್ತೆ
ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ನಗರದ ಕ್ಲಬ್ ರೋಡ್‌ನ ಹ್ಯೊಮ್ ಪಾರ್ಕ್‌ನಲ್ಲಿ ಈ ಸಸ್ಯ ಸಂತೆ ಆಯೋಜಿಸಲಾಗಿದೆ.
ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ಉತ್ತಮ ಗುಣಮಟ್ಟದ ಹೂವಿನ ಅಲಂಕಾರಿಕ ಗಿಡಗಳು, ವಿವಿಧ ಬಗೆಯ ಹಣ್ಣಿನ ಗಿಡಗಳು, ತಾಳೆ ಗಿಡಗಳು, ಅಣಬೆ ಉತ್ಪನ್ನಗಳು, ಜೇನು ಉತ್ಪನ್ನಗಳು, ಬೆಳಗಾವಿಯಲ್ಲಿ ಉತ್ಪಾದಿಸಿದ ವಿವಿಧ ಜೈವಿಕ ಗೊಬ್ಬರ, ರೋಗ ಮತ್ತು ಕೀಟನಾಶಕಗಳು ಹಾಗೂ ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಪಾದಿಸಿದ ಎರೆ ಜಲ, ಎರೆಹುಳು ಗೊಬ್ಬರ ಇಲಾಖೆ ದರದಲ್ಲಿ ಮಾರಾಟಕ್ಕೆ ಲಭ್ಯ ಇವೆ.
ಜಿಲ್ಲೆಯ ವಿವಿಧ ಭಾಗಗಳಿಂದ ವಿವಿಧ ಮಾದರಿಯ ಸಸಿಗಳನ್ನು ಖರೀದಿಸಲು ಸಾರ್ವಜನಿಕರು ಸ್ಥಳೀಯರು ಭಾಗವಹಿಸಿದರು. ಗ್ರಾಹಕರಿಂದ ಅವಶ್ಯವಿರುವ, ಸಸ್ಯಗಳು ಹಾಗೂ ವಸ್ತುಗಳನ್ನು ಖರೀದಿಸುವ ಮೂಲಕ ತೋಟಗಾರಿಕೆ ಉತ್ಪನ್ನಗಳಿಗೆ ಉತ್ತೇಜನ ನೀಡಲಾಯಿತು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಜಿಲ್ಲಾ ತೋಟಗಾರಿಕಾ ಸಂಘದ ಕಾರ್ಯದರ್ಶಿ ವಿ.ಎಚ್ ಲೆಂಗಡೆ ಹಾಗೂ ಮತ್ತಿತರ ಅಧಿಕಾರಿಗಳು ಅತಿಥಿಗಳಾಗಿ ಪಾಲ್ಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.