ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಡನಿಗೆ ಉಪ್ಪಿಟ್ಟಿನಲ್ಲಿ ವಿಷವಿಟ್ಟ ಹೆಂಡತಿ! ನಾಯಿ, ಬೆಕ್ಕು ಸಾವು– ಪತಿ ಐಸಿಯುಗೆ

ಸವದತ್ತಿ ತಾಲ್ಲೂಕಿನ ಗೋರಾಬಾಳ ಗ್ರಾಮದಲ್ಲಿ ಘಟನೆ
Published 18 ಆಗಸ್ಟ್ 2023, 14:37 IST
Last Updated 18 ಆಗಸ್ಟ್ 2023, 14:37 IST
ಅಕ್ಷರ ಗಾತ್ರ

ಬೆಳಗಾವಿ: ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬರು, ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆ ಮಾಡಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ವಿಷಪೂರಿತ ಉಪ್ಪಿಟ್ಟು ತಿಂದ, ಸವದತ್ತಿ ತಾಲ್ಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಆರೋಪಿಗಳು.

ಆಗಸ್ಟ್‌ 11ರಂದು ಘಟನೆ ನಡೆದಿದೆ. ಅಂದು ಬೆಳಿಗ್ಗೆ ಸಾವಕ್ಕ ಅವರು ಪತಿ ನಿಂಗಪ್ಪಗೆ ಉಪಾಹಾರಕ್ಕಾಗಿ ಉಪ್ಪಿಟ್ಟು ಮಾಡಿದ್ದರು. ಅದನ್ನು ತಿಂದ ಕೆಲ ಗಂಟೆಗಳಲ್ಲಿ ನಿಂಗಪ್ಪ ತೀವ್ರ ನೋವಿನಿಂದ ಬಳಲಿದರು. ಕುಟುಂಬದವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ, ವೈದ್ಯರ ಸಲಹೆ ಮೇರೆಗೆ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಿದರು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದೇ ಉಪ್ಪಿಟ್ಟು ತಿಂದ ಒಂದು ನಾಯಿ, ಒಂದು ಬೆಕ್ಕು ಸತ್ತುಹೋಗಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ನಿಂಗಪ್ಪ ಅವರ ತಂದೆ ಫಕೀರಪ್ಪ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT