ಬುಧವಾರ, ಆಗಸ್ಟ್ 4, 2021
21 °C

ವಿಷ ಸೇವನೆ: ಇಬ್ಬರು ಮಕ್ಕಳು ಸಾವು, ತಂದೆ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದಲ್ಲಿ ವಿಷ ಸೇವಿಸಿದ ಇಬ್ಬರು ಬಾಲಕಿಯರು ಸಾವಿಗೀಡಾಗಿ, ತಂದೆಯು ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ಬುಧವಾರ ನಡೆದಿದೆ.

ಅಂಜಲಿ (8) ಹಾಗೂ ಅನನ್ಯಾ (4) ಮೃತರು. ಅವರ ತಂದೆ ಅನಿಲ ಚಂದ್ರಕಾಂತ ಬಾಂದೇಕರ (45) ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮಕ್ಕಳು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

‘ಹಿಂಡಲಗಾ ಬಳಿಯ ವಿಜಯನಗರದ ನಿವಾಸಿಯಾದ ಅನಿಲ್, ಕಂಗ್ರಾಳಿ ಕೆ.ಎಚ್. ಮನೆಯಲ್ಲಿರುವ ತಮ್ಮ ಇನ್ನೊಂದು ಮನೆಗೆ ಮಕ್ಕಳನ್ನು ಕರೆ ತಂದಿದ್ದರು. ಈ ವೇಳೆ ವಿಷ ಸೇವಿಸಿರಬಹುದು ಎಂಬ ಮಾಹಿತಿ ಸಿಕ್ಕಿದೆ. ಅವರು ಟೈಲ್ಸ್ ಜೋಡಿಸುವ ಕೆಲಸ ಮಾಡುತ್ತಿದ್ದರು. ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಪತ್ನಿಯನ್ನು ವಿಜಯನಗರದ ಮನೆಯಲ್ಲಿ ಬಿಟ್ಟು ಬಂದಿದ್ದರು. ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ’ ಎಂದು ಪೊಲೀಸರು ತಿಳಿಸಿದರು.

ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು