ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ವಾರ್ಷಿಕ ಕ್ರೀಡಾಕೂಟ ಆರಂಭ

Last Updated 3 ಜನವರಿ 2019, 12:50 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಇಲ್ಲಿನ ಕವಾಯತು ಮೈದಾನದಲ್ಲಿ ಜ. 5ರವರೆಗೆ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಕಾನೂನು– ಸುವ್ಯವಸ್ಥೆ ಕಾಪಾಡುವ ನಿತ್ಯದ ಒತ್ತಡಗಳಿಂದ ದೂರಾಗಿದ್ದ ಸಿಬ್ಬಂದಿ, ಆಟೋಟಗಳಲ್ಲಿ ಪಾಲ್ಗೊಂಡು ರಿಲ್ಯಾಕ್ಸ್‌ ಆದರು. ಸ್ಪರ್ಧೆಯಲ್ಲಿ ಗೆಲ್ಲಬೇಕೆಂಬ ಉತ್ಸಾಹ ತೋರಿಸಿದರು.

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಉದ್ಘಾಟಿಸಿದರು. ‘ಪೊಲೀಸರಿಗೆ ಫಿಟ್‌ನೆಸ್‌ ಬಹಳ ಮುಖ್ಯ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಆಗಾಗ ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ, ನವಚೈತನ್ಯ ಮೂಡುತ್ತದೆ’ ಎಂದು ತಿಳಿಸಿದರು.

ಕ್ರೀಡಾಪಟುಗಳು ಆಕರ್ಷಕವಾಗಿ ಪಥಸಂಚಲನ ನಡೆಸಿ, ಗೌರವರಕ್ಷಾ ವಂದನೆ ಸಲ್ಲಿಸಿದರು.

ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ಎಸ್ಪಿ ಸಿ.ಎಚ್. ಸುಧೀರಕುಮಾರ ರೆಡ್ಡಿ, ಡಿಸಿಪಿಗಳಾದ ಸೀಮಾ ಲಾಟ್ಕರ್, ಮಹಾನಿಂಗ ನಂದಗಾವಿ, ಜಿಲ್ಲೆಯ ಎಲ್ಲ ಉಪವಿಭಾಗಗಳ ಎಸಿಪಿ, ಡಿಎಸ್‌ಪಿಗಳು, ಪಿಐ, ಸಿಪಿಐ, ಪಿಎಸ್‌ಐ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಕುಟುಂಬದವರು ಪಾಲ್ಗೊಂಡಿದ್ದರು.

ಉಪವಿಭಾಗವಾರು 8 ತಂಡಗಳನ್ನು ರಚಿಸಿ ವೈಯಕ್ತಿಕ ಮತ್ತು ಗುಂಪು ಕ್ರೀಡೆಗಳು, ಒಳಾಂಗಣ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರಿಗೂ ಸ್ಪರ್ಧೆಗಳು ನಡೆಯಲಿವೆ. 5ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಉತ್ತರವಲಯ ಐಜಿಪಿ ಎಚ್‌.ಎಸ್. ರೇವಣ್ಣ ಮುಖ್ಯಅತಿಥಿಯಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಬಹುಮಾನ ವಿತರಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT