ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್‌ಸ್ಟೆಬಲ್‌ ಪರೀಕ್ಷೆ ಅ.18ರಂದು

Last Updated 16 ಅಕ್ಟೋಬರ್ 2020, 6:50 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ವಿವಿಧೆಡೆ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಆವರಣದಲ್ಲಿ ಸೇರಿ ಒಟ್ಟು 40 ಕೇಂದ್ರಗಳಲ್ಲಿ ಅ. 18ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಪೊಲೀಸ್ ಕಾನ್‌ಸ್ಟೆಬಲ್‌ (ಸಶಸ್ತ್ರ) ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಇಲ್ಲಿ 11,420 ಮಂದಿ ಅರ್ಜಿ ಸಲ್ಲಿಸಿ ನೋಂದಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ‘ಪರೀಕ್ಷೆಗಳು ನಿಷ್ಪಕ್ಷಪಾತ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ನಡೆಯುವಂತೆ ನೋಡಿಕೊಳ್ಳಲು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT