ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ವಿಸರ್ಜನೆ: ಪೊಲೀಸ್ ಬಂದೋಬಸ್ತ್‌

Last Updated 18 ಸೆಪ್ಟೆಂಬರ್ 2021, 16:33 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ ಸೆ.19ರಂದು ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆಯಲಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ’ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

‘1,200 ಸಿಬ್ಬಂದಿ, 60 ಪಿಎಸ್‌ಐ, 40 ಇನ್‌ಸ್ಪೆಕ್ಟರ್‌ಗಳು, 8 ಎಸಿಪಿಗಳು, 8 ಕೆಎಸ್‌ಆರ್‌ಪಿ ತುಕಡಿಗಳು, 10 ಸಿಎಆರ್‌ ತುಕಡಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಮೂರ್ತಿಗಳ ವಿಸರ್ಜನಾ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರು ಇರಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಸಂಜೆ 5ರ ಒಳಗೆ ವಿಸರ್ಜನೆ ಕಾರ್ಯಕ್ರಮ ಮುಗಿಸುವಂತೆ ಸಾರ್ವಜನಿಕ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳನ್ನು ಭೇಟಿಯಾಗಿ ಕೋರಲಾಗಿದೆ. ಮೆರವಣಿಗೆಗೆ ಅವಕಾಶ ಇರುವುದಿಲ್ಲ ಎಂದೂ ತಿಳಿಸಲಾಗಿದೆ. ಮೂರ್ತಿಯೊಂದಿಗೆ ಕೇವಲ 10 ಮಂದಿ ಮಾತ್ರ ಬರಬೇಕು ಎಂದು ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಮತ್ತು ಅಂತರ ಕಾಯ್ದುಕೊಳ್ಳಬೇಕು. ರಾತ್ರಿ 9ರ ನಂತರ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT