ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಒತ್ತಡದ ಮಧ್ಯೆ ಆರೋಗ್ಯ ಕಾಪಾಡಿಕೊಳ್ಳಿ: ರಾಜೇಂದ್ರ ಕಲಘಟಗಿ

ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸ್ವಾತಂತ್ರ್ಯ ಹೋರಾಟಗಾರ
Last Updated 19 ನವೆಂಬರ್ 2022, 5:00 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರತಿದಿನವೂ ನಿಯಮಿತ ಹಾಗೂ ಸಮತೋಲನದ ಆಹಾರ ಸೇವನೆ, ಸಮಯಕ್ಕೆ ಸರಿಯಾಗಿ ವಾಯುವಿಹಾರ, ಯಾವುದೇ ಒತ್ತಡ ಪರಿಸ್ಥಿತಿಯಲ್ಲಿಯೂ ಹೊರಗಿನ ಪದಾರ್ಥ ಸೇವಿಸದೇ ಇರುವುದೇ ನನ್ನ ಆರೋಗ್ಯದ ಗುಟ್ಟು. ಪೊಲೀಸ್‌ ಪಡೆ ಸೇರಿದವರು ಇಂಥ ಜೀವನಶೈಲಿ ರೂಢಿಸಿಕೊಳ್ಳುವುದು ಅಗತ್ಯ’ ಎಂದು ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಕಿವಿಮಾತು ಹೇಳಿದರು.

ನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಸಿದ ಎರಡು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಜ್ಜಾದ ಪೊಲೀಸರಿಗೆ ದಿನವೂ ಒತ್ತಡಗಳು ಇರುತ್ತದೆ. ಇದರ ಮಧ್ಯೆ ಉತ್ತರ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಅವಶ್ಯ. ನಿಯಮಿತ ಆಹಾರ ಹಾಗೂ
ವ್ಯಾಯಾಮ ಎರಡನ್ನೂ ಮರೆಯಬೇಡಿ’ ಎಂದರು.

ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕ್ರೀಡಾಕೂಟ ಒಂದು ವಿಶೇಷವಾಗಿದೆ. ದೈಹಿಕ ಹಾಗೂ ಮಾನಸಿಕ ಸದೃಢತೆ ಬಹಳ ಮುಖ್ಯವಾಗಿದೆ. ಸಾಮರ್ಥ ವೃದ್ಧಿ ಹಾಗೂ ತಂಡದ ಬಲವರ್ಧನೆ
ಗಾಗಿ ಎಲ್ಲರೂ ಕ್ರೀಡೆಗಳಲ್ಲಿ
ಆಸಕ್ತಿಯಿಂದ ಭಾಗವಹಿಸುವುದು ಮುಖ್ಯ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ‌ ನಂದಗಾವಿ, ಡಿಸಿಪಿಗಳಾದ ಸ್ನೇಹಾ ಪಿ.ವಿ., ರವೀಂದ್ರ ಗಡಾದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಕ್ರೀಡಾಪಟುಗಳ ಗುಂಪು ಹಾಗೂ ಪೊಲೀಸ್‌ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಅವರು ಪೊಲೀಸ್‌ ವಂದನೆ ಸ್ವೀಕರಿಸಿದರು.

ಇದೇ ವೇಳೆ ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸುವ ಮೂಲಕ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಲೂನುಗಳನ್ನು ಹಾರಿಬಿಟ್ಟು ಶಾಂತಿಯ ಸಂದೇಶ ಸಾರಿದರು. ವಿವಿಧ ವಿಭಾಗಗಳ ಪೊಲೀಸ್‌ ಅಧಿಕಾರಿಗಳು ಹಾಗೂ ಅವರ ಕುಟುಂಬ ವರ್ಗದವರೂ ಪಾಲ್ಗೊಂಡು ಖುಷಿಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT