ಬೆಳಗಾವಿ: ‘ರಾಜ್ಯದಲ್ಲಿ ಒಂದು ವಾರದಲ್ಲಿ ರಾಜಕೀಯ ಬದಲಾವಣೆಗಳು ಆಗಬಹುದು. ಏನೇ ಇದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ. ಏನಾಗುತ್ತದೆಯೋ ಕಾದು ನೋಡೋಣ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ’ ಎಂದರು.

‘ಮುಖ್ಯಮಂತ್ರಿ ಬದಲಾವಣೆ ವಿಷಯ ಮಾಧ್ಯಮದಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಹೀಗಾಗಿ, ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಕರೆದರೆ ಭಾಗವಹಿಸುತ್ತೇನೆ. ಅವರೊಂದಿಗೆ ಚರ್ಚಿಸಲು ಬಹಳಷ್ಟು ವಿಷಯಗಳಿವೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.