ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ರಾಜಕೀಯ ಹುನ್ನಾರ: ಆರ್‌.ಕೆ.ಪಾಟೀಲ

Published : 2 ಸೆಪ್ಟೆಂಬರ್ 2024, 15:39 IST
Last Updated : 2 ಸೆಪ್ಟೆಂಬರ್ 2024, 15:39 IST
ಫಾಲೋ ಮಾಡಿ
Comments

ಬೆಳಗಾವಿ: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಿಯಮಾನುಸಾರ ಅನುಮತಿ ಪಡೆದಿದ್ದರೂ ಅವರ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್‌ ಘಟಕ ಸ್ಥಾಪನೆಗೆ ತಡೆಯೊಡ್ಡಲಾಗಿದೆ. ವಿನಾಕಾರಣ ರಾಜಕೀಯ ಮಾಡುತ್ತಿರುವುದು ಖಂಡನೀಯ’ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಕೆ.ಪಾಟೀಲ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯತ್ನಾಳ ಅವರನ್ನು ರಾಜಕೀಯವಾಗಿ ತುಳಿಯಬೇಕು ಎಂಬ ಹುನ್ನಾರ ಇದರಲ್ಲಿದೆ. ಇದು ಯಾವುದೇ ಜಾತಿ ಅಥವಾ ಪಕ್ಷದ ವಿರುದ್ಧ ನಡೆದ ಕುತಂತ್ರವಲ್ಲ; ಬಲಾಢ್ಯರಾಗಿ ಬೆಳೆಯುತ್ತಿರುವ ಯತ್ನಾಳ ವಿರುದ್ಧದ ಕುತಂತ್ರ’ ಎಂದರು.

‘ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಯಾರದೋ ಮಾತು ಕೇಳಿ ಎಥೆನಾಲ್‌ ಘಟಕ ಸ್ಥಾಪನೆಗೆ ತಡೆಯೊಡ್ಡಿದ್ದಾರೆ. ಇದು ಯತ್ನಾಳ ಅವರ ಕಾರ್ಖಾನೆ ಎಂಬ ಕಾರಣಕ್ಕೆ ನಾವು ಪ್ರಶ್ನೆ ಮಾಡುತ್ತಿಲ್ಲ. ಇದು ಸಾವಿರಾರು ರೈತರಿಗೆ ಸಂಬಂಧಿಸಿದ ವಿಷಯವಾಗಿದೆ’ ಎಂದೂ ಹೇಳಿದರು.

‘ಯತ್ನಾಳ ಅವರಿಗೆ ಈಗಾಗಲೇ ನ್ಯಾಯಾಲಯದಲ್ಲೇ ಅನುಮತಿ ಸಿಕ್ಕಿದೆ. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿ ವಿನಾಕಾರಣ ನೆಪ ಹೇಳಿ ವಿಳಂಬ ಮಾಡುತ್ತಿದೆ. ಸೆ. 25ರವರೆಗೆ ಕಾದು ನೋಡುತ್ತೇವೆ. ಅಷ್ಟರೊಳಗೆ ಪರವಾನಗಿ ನೀಡದೇ ಇದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಸಹಕಾರ ಸಕ್ಕರೆ ಕರ್ಖಾನೆಗಳ ರೈತ ಘಟಕದ ರಾಜ್ಯ ಅಧ್ಯಕ್ಷ ರಾಜು ಕುಡಸೋಮಣ್ಣವರ, ಅಖಿಲ ಕರ್ನಾಟಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ರಾಜು ಸೊಗಲ, ಲಿಂಗಾಯತ ಮಂಚಮಸಾಲಿ ಸಮಾಜದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ನಿಂಗಪ್ಪ ಪಿರೋಜಿ, ಲಿಂಗಾಯತ ಪಂಚಮಸಾಲಿ ಯುವ ಘಟಕದ ಜಿಲ್ಲಾಧ್ಯಕ್ಷ ಶಿವನಗೌಡ ಪಾಟೀಲ, ಕಾರ್ಯದರ್ಶಿ ರಾಜು ಮಗದುಮ್, ನಗರ ಘಟಕದ ಅಧ್ಯಕ್ಷ ಶಿವಾನಂದ ತಂಬಾಕೆ, ಬಸವ ಸೌಹಾರ್ದ ಸೊಸೈಟಿ ಅಧ್ಯಕ್ಷ ಶಿವಾನಂದ ಬಡ್ಡಿಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT