ಮಂಗಳವಾರ, ಜೂನ್ 22, 2021
22 °C

ಬೆಳಗಾವಿ ಲೋಕಸಭಾ ಕ್ಷೇತ್ರ: ‘ಕರಿ’ಯಂದು ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ ಜಾರಕಿಹೊಳಿ ಮಾರ್ಚ್‌ 29ರಂದು ಬೆಳಿಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಭಾಗದಲ್ಲಿ, ಹೋಳಿ ಹುಣ್ಣಿಮೆಯ ಮರು ದಿನವನ್ನು (ಸೋಮವಾರ) ‘ಕರಿ’ ಎಂದು ಆಚರಿಸಲಾಗುತ್ತಿದೆ. ಅಂದು ಶುಭ ಕಾರ್ಯ ಮಾಡಲು ಇಲ್ಲಿನ ಬಹುತೇಕರು ಬಯಸುವುದಿಲ್ಲ. ನಾಮಪತ್ರ ಸಲ್ಲಿಕೆಗೆ ಸತೀಶ ಅವರು ಈ ದಿನವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

‘ಹಿಂದಿನಂತೆಯೇ ಯಾವುದೇ ಆಡಂಬರ, ಮೆರವಣಿಗೆ ಮಾಡದೆ ಅತ್ಯಂತ ಸರಳವಾಗಿ ಪಕ್ಷದ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಾರದು’ ಎಂದು ಕೋರಿದ್ದಾರೆ.

‘ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ವೇಳೆ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ್ದೆ. ಕರಿ ದಿನವೆಂದರೆ ಇಡೀ ದಿನ ರಾಹುಕಾಲ ಇದ್ದಂತೆಯೇ. ಅದರಲ್ಲೆಲ್ಲಾ ನನಗೆ ನಂಬಿಕೆ ಇಲ್ಲ. ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯ ಕಾಲ. ಕೆಟ್ಟ ಕೆಲಸ ಮಾಡಿದರೆ ಕೆಟ್ಟ ಕಾಲವಷ್ಟೆ’ ಎಂದು ಪ್ರತಿಕ್ರಿಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು