ಬೆಳಗಾವಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಎಫ್‌ಪಿಎಐ (ಪ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ) ಬೆಳಗಾವಿ ಶಾಖೆಯ ಅಧ್ಯಕ್ಷೆ ಅನಿತಾ ಪಾಗಾದ ಹೇಳಿದರು.
ನಗರದ ಜಿ.ಎ. ಕಾಲೇಜಿನಲ್ಲಿಎಫ್‌ಪಿಎಐ ಹಾಗೂ ಕಾಲೇಜಿನ ಎನ್‌ಎಸ್‌ಎಸ್ ವಿಭಾಗದ ಸಹಯೋಗದಲ್ಲಿ ಇತ್ತೀಚೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಾಲಕರು ಬಾಲ್ಯ ವಿವಾಹಕ್ಕೆ ಆಸ್ಪದ ನೀಡದೇ, ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು’ ಎಂದರು.
ಶಾಖೆಯ ನಿಕಟಪೂರ್ವ ಅಧ್ಯಕ್ಷ ಪ್ರೊ.ಜಿ.ಕೆ. ಕಡಬಡಿ ಮಾತನಾಡಿ, ‘ಕಾನೂನಿನ ಪ್ರಕಾರ ವಯೋಮಿತಿ ಹೊಂದಿದದವರು ಮಾತ್ರ ವಿವಾಹ ಮಾಡಿಕೊಳ್ಳಬೇಕು. ಮಕ್ಕಳ ಜನನದ ನಡುವೆ ಅಂತರ ಕಾಯ್ದುಕೊಳ್ಳಬೇಕು. ಚಿಕ್ಕ ಕುಟುಂಬಕ್ಕೆ ಆದ್ಯತೆ ನೀಡಬೇಕು. ಇದರಿಂದ ವೈಯಕ್ತಿಕವಾಗಿ ಅನುಕೂಲವಾಗುವುದರ ಜೊತೆಗೆ ದೇಶದ ಜನಸಂಖ್ಯೆ ನಿಯಂತ್ರಣಕ್ಕೂ ಕಡಿವಾಣ ಹಾಕಿದಂತಾಗುತ್ತದೆ’ ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಆರ್.ಎಸ್. ಪಾಟೀಲ ಮಾತನಾಡಿದರು. ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ನಿಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮೋಹನ ಗುಂಡ್ಲೂರ,ಕೃಷ್ಣ ಗುಮಾಸ್ತೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.