ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ-ಧಾರವಾಡ ನೇರ ರೈಲು: ಕೋರೆ ಹರ್ಷ

Last Updated 8 ಸೆಪ್ಟೆಂಬರ್ 2020, 16:29 IST
ಅಕ್ಷರ ಗಾತ್ರ

ಬೆಳಗಾವಿ: ‘ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದು ಹರ್ಷ ಉಂಟು ಮಾಡಿದೆ’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿ ಮಹಾನಗರಗಳು ವಾಣಿಜ್ಯ ಹಾಗೂ ಔದ್ಯೋಗಿಕವಾಗಿ ಶರವೇಗದಲ್ಲಿ ಬೆಳೆಯುತ್ತಿವೆ. ಈ ಭಾಗದ ಸಾರಿಗೆ ವ್ಯವಸ್ಥೆಯಲ್ಲೂ ಕ್ರಾಂತಿಕಾರಿ ಬದಲಾವಣೆಯಾದರೆ ಅಭಿವೃದ್ಧಿಗೆ ಮತ್ತಷ್ಟು ವೇಗಗೊಳ್ಳುವುದರಲ್ಲಿ ಸಂದೇಹವಿಲ್ಲ. ಇದರೊಂದಿಗೆ ಜನರ ಆರ್ಥಿಕ ಮಟ್ಟವೂ ಪ್ರಗತಿ ಹೊಂದುತ್ತದೆ’ ಎಂದಿದ್ದಾರೆ.

‘ಕಾಮಗಾರಿಯು ತ್ವರಿತವಾಗಿ ಪೂರ್ಣಗೊಳ್ಳಲಿ’ ಎಂದು ಆಶಿಸಿದ್ದಾರೆ.

‘ಇಲ್ಲಿವರೆಗೆ ಹಲವು ಮಂದಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದರು. ಅವರು ಇಲ್ಲಿನ ಜನರ ಆಶೋತ್ತರಗಳಿಗೆ ಸ್ಪಂದಿಸಿರಲಿಲ್ಲ. ಈಗಿನ ಸಚಿವ ಸುರೇಶ ಅಂಗಡಿ ಅವರು ಜನರ ದನಿಯಾಗಿ ಅನುಮೋದನೆ ಪಡೆದಿರುವುದು ಅಭಿನಂದನಾರ್ಹ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT