ಮಂಗಳವಾರ, ಆಗಸ್ಟ್ 16, 2022
29 °C

ದಶಕದಿಂದ ನನೆಗುದಿಗೆ ಬಿದ್ದಿದ್ದ 240 ಮನೆಗಳ ನಿರ್ಮಾಣಕ್ಕೆ ಯೋಜನೆಗೆ ಭೂಮಿಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 240 ಮನೆಗಳ ನಿರ್ಮಾಣಕ್ಕೆ ಶಾಸಕ ಅಭಯ ಪಾಟೀಲ ಸೋಮವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ, '2013ರಲ್ಲೇ ನಗರದ ಹಲವಾರು ಜನರು ಪಾಲಿಕೆಗೆ ಹಣ ತುಂಬಿದ್ದರು. ಬೇರೆ ಶಾಸಕರು ಬಂದ ನಂತರ ಈ ವಸತಿ ಯೋಜನೆ ನನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಚಾಲನೆ ದೊರಕಿದ್ದು, ಇನ್ನು 15 ತಿಂಗಳಲ್ಲಿ ಈ ವಸತಿ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ' ಎಂದರು.

ಈ ಹಿಂದೆ ಮನೆ ಹಂಚಿಕೆಯಲ್ಲಿ ಆದ ಯಾವ ಗೊಂದಲವೂ ಇಲ್ಲಿ ಆಗುವುದಿಲ್ಲ. ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಮನೆ ವಿತರಿಸುವ ಕಾರ್ಯ ಆಗುತ್ತದೆ ಎಂದು ಹೇಳಿದರು.

ಈಗಾಗಲೇ ವಸತಿ ಸಲುವಾಗಿ ಸರ್ಕಾರಕ್ಕೆ ಹಣ ಪಾವತಿ ಮಾಡಿದ ಸಾರ್ವಜನಿಕರೇ ಇಲ್ಲಿ ಪಾಲಾನುಭವಿಗಳಾಗುತ್ತಾರೆ ಎಂದೂ ಹೇಳಿದರು.

ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಉಪ ಆಯುಕ್ತೆ ಹುಗ್ಗಿ, ಪಾಲಿಕೆ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು