ಬುಧವಾರ, ಅಕ್ಟೋಬರ್ 21, 2020
24 °C

ಮೋಳೆ: ಸ್ಮಶಾನ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೋಳೆ: ಇಲ್ಲಿನ ಸ್ಮಶಾನದ ಪರಿಸರದಲ್ಲಿ ಬೆಳೆದಿದ್ದ ಮುಳ್ಳು ಮೊದಲಾದ ಕಳೆ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗ್ರಾಮ ಪಂಚಾಯಿತಿಯಿಂದ ಚಾಲನೆ ನೀಡಲಾಗಿದೆ.

ಅಲ್ಲಿನ ಅವ್ಯವವ್ಥೆ ಕುರಿತು ‘ಪ್ರಜಾವಾಣಿ’ಯಲ್ಲಿ ‘ಸ್ಮಶಾನಕ್ಕೆ ದಾರಿ ಇಲ್ಲದೆ ತೊಂದರೆ’ ಶೀರ್ಷಿಕೆಯಲ್ಲಿ ಗುರುವಾರ ವರದಿ ಪ್ರಕಟವಾಗಿತ್ತು. ಇದರಿಂದ ಪರಿಣಾಮ ಪಿಡಿಒ ದಾನಮ್ಮ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಂಚಾಯಿತಿ ಸಿಬ್ಬಂದಿಗೆ ಸೂಚನೆ ನೀಡಿ, ಜೆಸಿಬಿ ಯಂತ್ರದ ಸಹಾಯದಿಂದ ಮುಳ್ಳಿನ ಗಿಡ ಹಾಗೂ ಕಳೆ ಗಿಡಗಳನ್ನು ತೆರವುಗೊಳಿಸಿದ್ದಾರೆ. ರಾತ್ರಿ ವೇಳೆ ಶವ ಸಂಸ್ಕಾರಕ್ಕೆ ಅನುಕೂಲವಾಗಲೆಂದು ಬೆಳಕಿನ ವ್ಯವಸ್ಥೆಗಾಗಿ ವಿದ್ಯುತ್ ದೀಪಗಳನ್ನು ದುರಸ್ತಿ ಮಾಡಿಸಿದ್ದಾರೆ.

‘ಸದ್ಯ ಯಂತ್ರದ ಸಹಾಯದಿಂದ ಗಿಡಗಳನ್ನು ತೆರವುಗೊಳಿಸುತ್ತಿದ್ದೇವೆ. ನಂತರ ಸಂಪೂರ್ಣ ಸ್ವಚ್ಛಗೊಳಿಸಲಾಗುವುದು. ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಂಪೌಂಡ್ ನಿರ್ಮಿಸಿ, ನೀರಿನ ವ್ಯವಸ್ಥೆಯನ್ನೂ ಮಾಡಲಾಗುವುದು’ ಎಂದು ಪಿಡಿಒ ತಿಳಿಸಿದರು.

ಸ್ಮಶಾನ ಸ್ವಚ್ಛಗೊಳ್ಳಲು ಕಾರಣವಾದ ಪತ್ರಿಕೆಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದರು.

ಇದನ್ನೂ ಓದಿ: ಸ್ಮಶಾನಕ್ಕೆ ದಾರಿ ಇಲ್ಲದೆ ತೊಂದರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.