ಗುರುವಾರ , ಫೆಬ್ರವರಿ 20, 2020
23 °C

ಕಟ್ಟಡ ನಿರ್ಮಾಣಕ್ಕೆ ಮುಂದಾದ ಕಂಪನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕು ನಿಡಗುಂಡಿ ಗ್ರಾಮದ ಅಂಬೇಡ್ಕರ್‌ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿ ನಿರ್ಮಿಸಿಕೊಡಲು ಬೆಂಗಳೂರಿನ ‘ಎಕ್ಯುರೆಕ್ಸ್’ ಎನ್ನುವ ಖಾಸಗಿ ಕಂಪನಿ ಮುಂದೆ ಬಂದಿದೆ.

ಮಾದರಿಯಾಗಿ ರೂಪಗೊಂಡಿರುವ ಈ ಸರ್ಕಾರಿ ಶಾಲೆಯಲ್ಲಿ ಕೊಠಡಿಗಳ ಕೊರತೆ ಇರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ವರದಿ ಗಮನಿಸಿದ ಆ ಕಂಪನಿಯ ಅಧ್ಯಕ್ಷ ಕೆ.ಎನ್. ರಾಮ್‌ಮೋಹನ್ ಹಾಗೂ ಅವರ ಸ್ನೇಹಿತ ಗುರುಲಿಂಗ ಅಮ್ಮಣಗಿ ಶಾಲೆಗೆ ಬುಧವಾರ ಭೇಟಿ ನೀಡಿದರು. 120 ಮಕ್ಕಳಿಗೂ ಪೆನ್ಸಿಲ್, ರಬ್ಬರ್, ಶಾರ್ಪ್‌ನರ್‌ಗಳನ್ನು ವಿತರಿಸಿದರು. ಶಾಲೆಯಲ್ಲಿನ ವ್ಯವಸ್ಥೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.

‘ಶಾಲೆಯ ಆವರಣದಲ್ಲಿ 30x17 ಅಳತೆಯ ತರಗತಿ ಕೊಠಡಿ ನಿರ್ಮಿಸಿಕೊಡುವುದಾಗಿ ಅವರು ತಿಳಿಸಿದರು. ಗುತ್ತಿಗೆದಾರರೊಂದಿಗೂ ಮಾತನಾಡಿ ಒಪ್ಪಂದ ಮಾಡಿಕೊಂಡರು’ ಎಂದು ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು