ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪವಾಡ ಗಡಿಯಲ್ಲಿ ತಪಾಸಣೆ ಆರಂಭ

Last Updated 15 ಜುಲೈ 2021, 15:24 IST
ಅಕ್ಷರ ಗಾತ್ರ

ಮೋಳೆ (ಬೆಳಗಾವಿ ಜಿಲ್ಲೆ): ಮಹಾರಾಷ್ಟ್ರದ ಮೀರಜ್‌ ತಾಲ್ಲೂಕಿನ ಶಿಂದೇವಾಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಕೆಂಪವಾಡ ಗಡಿಯಲ್ಲಿ ಸ್ಥಾಪಿಸಿರುವ ತಪಾಸಣೆ ಕೇಂದ್ರಕ್ಕೆ ಸಿಬ್ಬಂದಿಯನ್ನು ಗುರುವಾರ ನಿಯೋಜಿಸಲಾಗಿದೆ.

ಚೆಕ್‌ಪೋಸ್ಟ್‌ ಇದ್ದರೂ ಸಿಬ್ಬಂದಿ ಇಲ್ಲದಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಗುರುವಾರ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಹಾಗೂ ಕಾಗವಾಡ ತಾಲ್ಲೂಕು ಆಡಳಿತದವರು ಸಿಬ್ಬಂದಿ ನಿಯೋಜಿಸಿದ್ದಾರೆ. ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ವಹಿಸಲಾಗುತ್ತಿದೆ. ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೆ ಪ್ರವೇಶ ನೀಡಲಾಗುತ್ತಿದೆ.

‘ತಾಲ್ಲೂಕಿನಲ್ಲಿ 4 ಚೆಕ್ ಪೋಸ್ಟ್‌ ಕಾರ್ಯನಿರ್ವಹಿಸುತ್ತಿವೆ. ಕೆಂಪವಾಡ ಗಡಿಯಿಂದ ಮಹಾರಾಷ್ಟ್ರದ ಶಿಂದೇವಾಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಚೆಕ್‌ಪೋಸ್ಟ್ ಅನ್ನು ಕೋವಿಡ್ ಮೊದಲನೇ ಅಲೆಯ ಸಂದರ್ಭ ನಿರ್ಮಿಸಿ, ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಕೆಲವು ದಿನಗಳ ಹಿಂದಿನಿಂದ ಸಿಬ್ಬಂದಿ ಕೊರತೆಯಿಂದಾಗಿ ರಸ್ತೆಯಲ್ಲಿ ಮಣ್ಣು ಹಾಕಿ ಬಂದ್ ಮಾಡಿದ್ದೆವು. ಗೂಡ್ಸ್‌ ವಾಹನಗಳಿಗೆ ತೊಂದರ ಆಗುತ್ತದೆ ಎಂದು ಸ್ಥಳೀಯರು ಹೇಳಿದ್ದರಿಂದ ಮಣ್ಣು ತೆರವು ಮಾಡಿಸಿದ್ದೆವು’ ಎಂದು ಕಾಗವಾಡ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ತಿಳಿಸಿದರು.

‘ನಾಲ್ವರು ಅಲ್ಲಿ ಗುರುವಾರದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಕದ ರಾಜ್ಯದಿಂದ ಬರುವವರ ಮೇಲೆ ನಿಗಾ ಇಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT