ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೈಲಹೊಂಗಲ: ಡಿ.19ರಂದು ಪ್ರತಿಭಾ ಪುರಸ್ಕಾರ, ರಸಮಂಜರಿ ಕಾರ್ಯಕ್ರಮ

Published 17 ಡಿಸೆಂಬರ್ 2023, 13:48 IST
Last Updated 17 ಡಿಸೆಂಬರ್ 2023, 13:48 IST
ಅಕ್ಷರ ಗಾತ್ರ

ಬೈಲಹೊಂಗಲ: ಸಮೀಪದ ಮುರಗೋಡ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್‌ ಪ್ರೌಢಶಾಲೆ ಆವರಣದಲ್ಲಿ ಡಿ.19ರಂದು ಸಂಜೆ 5ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಮುರಗೋಡ ಘಟಕ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಶಿವಚಿದಂಬರೇಶ್ವರ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಸಾಧಕರಿಗೆ, ಸಚಿವರಿಗೆ, ಶಾಸಕರಿಗೆ ಸನ್ಮಾನ, ರಸಮಂಜರಿ ಹಾಗೂ ನಗೆ ಹಬ್ಬ ಕಾರ್ಯಕ್ರಮ ನಡೆಯಲಿದೆ.

ಮುರಗೋಡ ನೀಲಕಂಠ ಸ್ವಾಮೀಜಿ, ಕೆಂಗೇರಿಮಠದ ದಿವಾಕರ ದೀಕ್ಷಿತರು, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಡಾ.ಮಹಾಂತಯ್ಯಶಾಸ್ತ್ರೀ ಆರಾದ್ರಿಮಠ ಸಾನ್ನಿಧ್ಯ, ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸುವರು.

ಸಚಿವ ಸತೀಶ ಜಾರಕಿಹೊಳಿ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಶಾಸಕ ಬಾಲಚಂದ್ರ ಜಾರಕಿಹೊಳಿ, ಶಾಸಕ ವಿಶ್ವಾಸ್‌ ವೈದ್ಯ ಕನ್ನಡಾಂಬೆ ಮೂರ್ತಿಗೆ ಪೂಜೆ ಸಲ್ಲಿಸಲ್ಲಿದ್ದು, ಅನೇಕ ಗಣ್ಯರು ಪಾಲ್ಗೊಳ್ಳುವರು ಎಂದು ಘಟಕದ ಅಧ್ಯಕ್ಷ ಉದಯಕುಮಾರ ಚಿಕ್ಕಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT