ಗುರುವಾರ , ಸೆಪ್ಟೆಂಬರ್ 24, 2020
27 °C

‘ಸ್ವಾಮಿತ್ವ ಯೋಜನೆಗೆ ಸಿದ್ಧತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೌಜಲಗಿ: ‘ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕಿನ ಆಯ್ದ ಗ್ರಾಮಗಳಲ್ಲಿ ಶೀಘ್ರದಲ್ಲಿಯೇ ಚಾಲನೆ ದೊರೆಯಲಿದೆ’ ಎಂದು ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆ ಸೂಪರ್‌ವೈಸರ್‌ ಬಿ.ವೈ. ಉಪ್ಪಾರ ತಿಳಿಸಿದರು.

ಸೋಮವಾರ ಸಮೀಪದ ಢವಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಮಟ್ಟಿ, ಢವಳೇಶ್ವರ ಹಾಗೂ ಮನ್ನಾಪೂರ ಗ್ರಾಮದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.

‘ಗ್ರಾಮೀಣ ಜನರು ಆಸ್ತಿ ದಾಖಲೆಗಳನ್ನು ಪಡೆಯಲು ಯೋಜನೆಯು ಸಹಕಾರಿಯಾಗಿದೆ. ಆಸ್ತಿಯ ವಿಸ್ತೀರ್ಣ, ಸೀಮೆಯನ್ನು ಗುರುತಿಸಿಕೊಳ್ಳಬಹುದಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಡ್ರೋಣ್‌ ಆಧಾರಿತ ಸಮೀಕ್ಷೆ ಕೈಗೊಳ್ಳಲಾಗುವುದು. ಗ್ರಾಮಗಳ ಆಸ್ತಿಯನ್ನು ಬಿಳಿ ಬಣ್ಣದಿಂದ ಗುರುತಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಮೂಡಲಗಿ ತಾಲ್ಲೂಕಿನ ಅರಳಿಮಟ್ಟಿ, ಢವಳೇಶ್ವರ ಹಾಗೂ ಮನ್ನಾಪೂರ ಗ್ರಾಮಗಳು ಹಾಗೂ ಗೋಕಾಕ ತಾಲ್ಲೂಕಿನ ಶಿಲ್ತಿಭಾಂವಿ, ಪುಡಕಲಕಟ್ಟಿ, ಜಮನಾಳ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದರು.

ಸರ್ವೆ ಸೂಪರ್‌ವೈಸರ್‌ ಎಂ.ಆರ್. ಭೋವಿ, ಸರ್ವೆ ಅಧಿಕಾರಿಗಳಾದ ವೀರೇಶ ಮೇಟಿ, ಎಂ.ಎಚ್. ಸಿಂದಗಿ, ಗಣೇಶ ದೇವಾಡಿಗ, ಪ್ರಕಾಶ ಕಾಳಗಿ, ಶಂಕರ ಪಿಡಶೆಟ್ಟಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.