ಗುರುವಾರ , ಮೇ 13, 2021
22 °C

ಮತ ಎಣಿಕೆ ಕೊಠಡಿಗಳ ಸಂಖ್ಯೆ ಹೆಚ್ಚಳ: ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಕೋವಿಡ್-19 ಮಾರ್ಗಸೂಚಿ ಪ್ರಕಾರ ಅಂತರ ಕಾಯ್ದುಕೊಳ್ಳಲು ಅನುಕೂಲ ಆಗುವಂತೆ ಹೆಚ್ಚುವರಿ ಕೊಠಡಿಗಳನ್ನು ಕಲ್ಪಿಸಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ ಏಳು ಟೇಬಲ್‌ಗಳ ವ್ಯವಸ್ಥೆ ಮಾಡಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದರು.

ನಗರದ ಆರ್.ಪಿ.ಡಿ. ಕಾಲೇಜಿನಲ್ಲಿ ಮೇ 2ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಅಲ್ಲಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ, ಸಿದ್ಧತೆಯನ್ನು ಪರಿಶೀಲಿಸಿದರು.

‘ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಮತಕ್ಷೇತ್ರವಾರು ಮತ ಎಣಿಕೆಗೆ ಕೊಠಡಿಗಳನ್ನು ಗುರುತಿಸಿ ಎಲ್ಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಮೊದಲು ಪ್ರತಿ ವಿಧಾನಸಭಾ ಕ್ಷೇತ್ರವಾರು ಒಂದು ಕೊಠಡಿ ನಿಗದಿಪಡಿಸಿ ಪ್ರತಿ‌ ಕೊಠಡಿಯಲ್ಲಿ 14 ಟೇಬಲ್‌ಗಳಿಗೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಹೆಚ್ಚುವರಿ ಕೊಠಡಿ ಒದಗಿಸುವ ಮೂಲಕ ಪ್ರತಿ ಕೊಠಡಿಯಲ್ಲಿ ಏಳು ಟೇಬಲ್‌ಗೆ ಅವಕಾಶ ಇರುವಂತೆ ನೋಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

‘ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಚುನಾವಣಾ ಆಯೋಗದ ನಿರ್ದೇಶನದಂತೆ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್, ಸಹಾಯಕ ಚುನಾವಣಾಧಿಕಾರಿಗಳಾದ ಕೆ.ಎಚ್. ಜಗದೀಶ್, ಸಿ.ಬಿ. ಕೊಡ್ಲಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು