ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಫೆ. 27ರಂದು 8 ಕಿ.ಮೀ ರೋಡ್‌ ಶೋ ನಡೆಸಲಿರುವ ಪ್ರಧಾನಿ ಮೋದಿ

Last Updated 24 ಫೆಬ್ರವರಿ 2023, 16:14 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು 8 ಕಿ.ಮೀ.ವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಇದನ್ನು ನೋಡಲು 3 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

‘ಅಂದು ಮಧ್ಯಾಹ್ನ 1ರ ಸುಮಾರಿಗೆ ‍ಪ್ರಧಾನಿ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಯ ಜನ ಮೋದಿ ಅವರನ್ನು ನೋಡಲು ಕಾತರರಾಗಿದ್ದಾರೆ. ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ವಿಶಾಲವಾದ ರಸ್ತೆಗಳಲ್ಲಿ ಇದೊಂದು ಐತಿಹಾಸಿಕ ರೋಡ್‌ ಶೋ ಆಗಲಿದೆ’ ಎಂದು ಅವರು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ನವೀಕೃತ ರೈಲು ನಿಲ್ದಾಣ, ಡಬ್ಲಿಂಗ್‌ ಸೇರಿ ₹1,122 ಕೋಟಿ ವೆಚ್ಚದ ಕಾಮಗಾರಿ ಹಾಗೂ ಜಲಜೀವನ ಮಿಷನ್‌ ಅಡಿ ಮಾಡಿದ ₹1,130 ಕೋಟಿಯ ಕಾಮಗಾರಿ ಸೇರಿ ಒಟ್ಟು ₹ 2,252 ಕೋಟಿ ವೆಚ್ಚದ ಯೋಜನೆಗಳನ್ನು ಜನರಿಗೆ ಅರ್ಪಿಸಲಿದ್ದಾರೆ’ ಎಂದೂ ಹೇಳಿದರು.

ಮಹದಾಯಿ ಕಾಮಗಾರಿಗೆ ಪ್ರಧಾನಿ ಏಕೆ ಚಾಲನೆ ನೀಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮಹದಾಯಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ. ಪ್ರಾಧಿಕಾರ ರಚನೆಗೆ ಕೇಂದ್ರ ಒಪ್ಪಿಗೆ ನೀಡಿದೆ. ಅದರಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಕೇಂದ್ರದ ಪ್ರತಿನಿಧಿಗಳೂ ಇರುತ್ತಾರೆ. ನಿರೀಕ್ಷಿತ ಸಮಯಕ್ಕೆ ಕಾಮಗಾರಿ ಮಾಡುತ್ತೇವೆ. ಈ ಯೋಜನೆಯಿಂದ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಬದಲಾಗಿ, ಜಿಲ್ಲೆಯ ಅಥಣಿ ಬಳಿ ಭೂಮಿ ನೀಡಲಾಗುತ್ತಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT